ಮಡಿಕೇರಿ, ಸೆ. ೨೭: ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ ತಾ. ೨೯ ರಂದು ಬೆಳಿಗ್ಗೆ ೯ ಗಂಟೆಗೆ ಮೈಸೂರು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾಪಟುಗಳು ವರದಿ ಮಾಡಿಕೊಳ್ಳುವುದು, ಸಂಜೆ ೪.೩೦ ಗಂಟೆಗೆ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ನಡೆಯಲಿದೆ.
ತಾ. ೩೦, ಅಕ್ಟೋಬರ್ ೧, ಅಕ್ಟೋಬರ್ ೨ ರಂದು ಕ್ರೀಡಾಕೂಟ ನಡೆಯಲಿದೆ. ಅಕ್ಟೋಬರ್ ೨ ರಂದು ಸಂಜೆ ೪.೩೦ ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ವಿಭಾಗಮಟ್ಟದ ಕ್ರೀಡಾ ಕೂಟ ಸ್ಪರ್ಧೆಯಲ್ಲಿ ಭಾಗವಹಿಸಿರುವ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಗುಂಪುಗಳಿಗೆ ಮಾತ್ರ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಿದ್ದು, ಈ ಕುರಿತು ವಿಭಾಗ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಮೈಸೂರು ಜಿಲ್ಲೆಯ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ತಾ. ೨೯ ರಂದು ವರದಿ ಮಾಡಿಕೊಳ್ಳುವುದು. ತಪ್ಪಿದಲ್ಲಿ ಈ ಕ್ರೀಡಾಪಟುಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ದೂ. ಮೈಸೂರು ಕಚೇರಿ ೦೮೨೧-೨೫೬೪೧೭೯ ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.