ಮಡಿಕೇರಿ, ಸೆ. ೨೮: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ೪೦% ಕಮಿಷನ್ ದಂಧೆ ನಡೆಸುತ್ತಿದೆ ಎಂದು ಆರೋಪಿಸಿ ರಾಜ್ಯದೆಲ್ಲೆಡೆ ಕಾಂಗ್ರೆಸ್‌ನಿAದ ನಡೆಯುತ್ತಿರುವ ಪೇಸಿಎಂ ಪ್ರತಿಭಟನಾ ಅಭಿಯಾನದ ಹಿನ್ನೆಲೆ ನಗರದಲ್ಲಿಂದು ಜಿಲ್ಲಾ ಕಾಂಗ್ರಸ್‌ನಿAದ ಪ್ರತಿಭಟನೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿ, ಜಿಲ್ಲೆಯ ಶಾಸಕರುಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ರಾಜ್ಯದ ಬಿಜೆಪಿ ಸರ್ಕಾರ ೪೦% ಕಮಿಷನ್ ಸರ್ಕಾರ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರೆ ಬಹಿರಂಗ ಹೇಳಿಕೆ ನೀಡಿದ್ದು, ಇಂಥಹ ಸರ್ಕಾರವನ್ನು ಅಧಿಕಾರದಿಂದ ಕೆಳಗಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಹಗರಣಗಳ ಮೂಲಕ ಬಿಜೆಪಿ ಸರ್ಕಾರ ನಾಗರಿಕ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ ಬಿಜೆಪಿ ಸರ್ಕಾರದ ಬೆಂಬಲದಿAದಾಗಿ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ದೂರಿದರು. ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್, ಯುವ ಮುಖಂಡ ಮಂಥರ್ ಗೌಡ,ವಕ್ತಾರ ತೆನ್ನಿರಾ ಮೈನಾ, ಮಹಿಳಾ ಕಾಂಗ್ರೆಸ್‌ನ ಮಿನಾಸ್ ಪ್ರವೀಣ್, ಫ್ಯಾನ್ಸಿ, ನಗರಸಭಾ ಮಾಜಿ ಸದಸ್ಯರುಗಳಾದ ಪ್ರಕಾಶ್ ಆಚಾರ್ಯ, ಟಿ.ಹೆಚ್. ಉದಯಕುಮಾರ್, ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪೀಟರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪೇಸಿಎಂ ಭಿತ್ತಿಪತ್ರವನ್ನು ಜಿಟಿ ವೃತ್ತದ ಬಳಿ ಅಂಟಿಸಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.