ಕುಶಾಲನಗರ, ಸೆ.೨೮: ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ‘ಪೇ ಸಿಎಂ’ ಪೋಸ್ಟರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕುಶಾಲನಗರ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಗೊಳಿಸಿದರು. ಕುಶಾಲನಗರ ಪ್ರವಾಸಿ ಮಂದಿರದಿAದ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದ ಕಾರ್ಯಕರ್ತರು ಗಣಪತಿ ದೇವಾಲಯ ಮುಂಭಾಗ ಸೇರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ರಾಜ್ಯ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕುಖ್ಯಾತಿ ಗಳಿಸಿದೆ. ಸರ್ಕಾರ ೪೦% ಸರ್ಕಾರವಾಗಿದೆ ಎಂದು ಆರೋಪಿಸಿದರು.
ಪ್ರತಿಭಟನಾಕಾರರು ಪೇ ಸಿಎಂ ಪೋಸ್ಟರ್‌ಗಳನ್ನು ಪ್ರದರ್ಶಿಸಿ ಅಂಟಿಸಲು ಯತ್ನಿಸಿದ ಸಂದರ್ಭ ತಡೆ ಒಡ್ಡಿದ ಪೊಲೀಸರು ಪೋಸ್ಟರ್‌ಗಳನ್ನು ಕಿತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು.
ಈ ಸಂದರ್ಭ ನಗರಾಧ್ಯಕ್ಷ ಪ್ರಮೋದ್ ಮುತ್ತಪ್ಪ, ಕಾಂಗ್ರೆಸ್ ಪ್ರಮುಖರಾದ ಮಂಜುನಾಥ್ ಗುಂಡುರಾವ್, ಜೋಸೆಫ್ ವಿಕ್ಟರ್ ಸೋನ್ಸ್, ಅಬ್ದುಲ್ ರಜಾಕ್, ಷೇಕ್ ಕಲಿಮುಲ್ಲ, ಸುಂದರೇಶ್, ಭೀಮಯ್ಯ, ಆದಮ್, ಚಂದ್ರ, ಪ್ರಕಾಶ್ ಮತ್ತಿತರರು ಇದ್ದರು.