ಮರಗೋಡು: ಮರಗೋಡು ಗ್ರಾಮ ಪಂಚಾಯಿತಿ ೨೦೨೧-೨೨ನೇ ಸಾಲಿನ ಜಮಾಬಂದಿ ಸಭೆ ಅ. ೧ ರಂದು ಪೂರ್ವಾಹ್ನ ೧೧ ಗಂಟೆಗೆ ವಿವೇಕಾನಂದ ಯುವಕ ಸಂಘದ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎ.ಎಸ್. ಪೂರ್ಣಿಮಾ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮಧ್ಯಾಹ್ನ ೧೨.೩೦ಕ್ಕೆ ವಿಶೇಷ ಗ್ರಾಮಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
* ಹುದಿಕೇರಿ: ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಗ್ರಾಮಗಳ ೨೦೨೧-೨೦೨೨ ಸಾಲಿಗೆ ಸಂಬAಧಿಸಿದAತೆ ಜಮಾಬಂದಿ ಸಭೆ ಪಂಚಾಯಿತಿ ಅಧ್ಯಕ್ಷ ಕೊಡಂಗಡ ಪಿ. ಬಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ತಾ. ೩೦ ರಂದು ಬೆಳಿಗ್ಗೆ ೧೧ ಗಂಟೆಗೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
* ಪೊನ್ನಪ್ಪಸಂತೆ: ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಜಮಾಬಂದಿ ಹಾಗೂ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆಯನ್ನು ತಾ. ೨೯ ರಂದು ಪೂರ್ವಾಹ್ನ ೧೧ ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ಚೀಯಕ್ಪೂವಂಡ ಪ್ರಭಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡಲ್ ಅಧಿಕಾರಿಯವರ ಸಮ್ಮುಖದಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.