ಮಡಿಕೇರಿ, ಸೆ. ೨೯: ಅಣ್ಣಳಮಾಡ ಮಾನಸ ತಿಮ್ಮಯ್ಯ ಅವರಿಗೆ ರಾಜ್ಯ ಸರಕಾರ ಕೊಡ ಮಾಡುವ ‘ವಿಮೆನ್ ಆಫ್ ದಿ ಫ್ಯೂಚರ್’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ನೀಡಲಾಯಿತು.
ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು, ಮಾನವ ಸಂಪನ್ಮೂಲ (ಊumಚಿಟಿ ಖesouಡಿಛಿes) ಕ್ಷೇತ್ರದಲ್ಲಿ ಮಾನಸ ಅವರು ಭಾರತ ಹಾಗೂ ಹೊರದೇಶಗಳಲ್ಲಿ ಮಾಡಿರುವ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಿದೆ. ಮಾನಸ ಅವರು ಗೋಣಿಕೊಪ್ಪ ಕಾಪ್ಸ್ ಶಾಲೆಯ ‘ಪಬ್ಲಿಕ್ ರಿಲೇಷನ್ಸ್ ಮ್ಯಾನೇಜರ್’ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.