ಕೂಡಿಗೆ, ಸೆ. ೨೯: ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿರುವ ಶ್ರೀ ಮಾತಾದೇವಿ ಸನ್ನಿಧಿಯಲ್ಲಿ ತಾ. ೩೦ ರಂದು (ಇಂದು) ಮೃತ್ಯುಂಜಯ ಹೋಮ ನಡೆಯಲಿದೆ. ತದನಂತರ ಶ್ರೀ ಚಂಡಿಕಾ ಹೋಮ, ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.