ಮಡಿಕೇರಿ, ಸೆ. ೨೯: ಕರ್ನಾಟಕ ರಾಜ್ಯದ ಅಪೆಕ್ಸ್ ಬ್ಯಾಂಕ್ ನೀಡುವ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿನ ಪ್ರಶಸ್ತಿಯನ್ನು ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಪಡೆದುಕೊಂಡಿದೆ.
ಕಳೆದ ಸಾಲಿನಲ್ಲಿ ಸಂಘದ ಕಾರ್ಯನಿರ್ವಹಣೆ, ಸಾಲ ಮರುಪಾವತಿ, ಸದಸ್ಯರಿಗೆ ನೀಡಿದ ಸೌಲಭ್ಯಗಳನ್ನು ಪರಿಗಣಿಸಿ, ಈ ಪ್ರಶಸ್ತಿಯನ್ನು ನೀಡಲಾಗಿದೆ.
ರಾಜ್ಯ ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರೂ, ಕೊಡಗು ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷರು ಆದ ಕೊಡಂದೇರ ಬಾಂಡ್ ಗಣಪತಿ ಅವರು ಪಯಸ್ವಿನಿ ಪ್ಯಾಕ್ಸ್ ಅಧ್ಯಕ್ಷ ಅನಂತ್ ಊರುಬೈಲು ಅವರಿಗೆ ಮಡಿಕೇರಿ ಕೇಂದ್ರ ಸಹಕಾರ ಬ್ಯಾಂಕ್ ಸಭಾಂಗಣದಲ್ಲಿ ನಗದು ಮತ್ತು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ರಾಜಾರಾಮ ಕಳಗಿ, ಕಾರ್ಯ ನಿರ್ವಹಣಾಧಿಕಾರಿ ಆನಂದ ಬಿ.ಕೆ., ನಿರ್ದೇಶಕ ರಾಮಮೂರ್ತಿ ಉಂಬಳೆ ಅವರು ಉಪಸ್ಥಿತರಿದ್ದರು.