ಸೋಮವಾರಪೇಟೆ, ಸೆ. ೩೦: ಪಟ್ಟಣ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯನ್ನು ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು ಉದ್ಘಾಟಿಸಿ ದರು. ನಂತರ ಮಾತನಾಡಿ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕು. ನಿವೇಶನ ರಹಿತರಿಗೆ ಸಧ್ಯದಲ್ಲಿಯೇ ನಿವೇಶನ ನೀಡುವ ಕೆಲಸ ನಡೆಯುತ್ತಿದ್ದು, ಸಧ್ಯದಲ್ಲಿಯೇ ಫಲಾನುಭವಿಗಳಿಗೆ ವಿತರಿಸ ಲಾಗುವುದು ಎಂದು ಹೇಳಿದರು.

ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಮಾತನಾಡಿ, ದಿನನಿತ್ಯದ ಸ್ವಚ್ಛತಾ ಕಾಯಕ ಮಾಡುತ್ತಿರುವ ಪೌರ ಕಾರ್ಮಿಕರು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ದುಶ್ಚಟಗಳಿಂದ ದೂರ ಇದ್ದು, ತಮ್ಮ ಆರೋಗ್ಯ ಕಾಪಾಡಿಕೊಳ್ಳಿ. ಇಂದು ಪೌರ ಕಾರ್ಮಿಕರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ನೀಡುತ್ತಿದೆ. ನಿವೇಶನ ಹೊಂದಿರುವವರಿಗೆ ಸಹಾಯಧನದ ಯೋಜನೆಯಲ್ಲಿ ಹಣದ ನೆರವು ನೀಡುತ್ತಿದ್ದು, ಇದನ್ನು ಬಳಸಿಕೊಳ್ಳಬೇಕೆಂದರು.

ವೇದಿಕೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷ ಬಿ. ಸಂಜೀವ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಮಂಜುನಾಥ್, ತಾಲೂಕು ಕಚೇರಿಯ ಶಿರಸ್ಥೆದಾರ್ ಚಂದ್ರ, ಪಂಚಾಯಿತಿ ಸದಸ್ಯರು ಇದ್ದರು. ಇದೇ ಸಂದರ್ಭ ಎಲ್ಲ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸ ಲಾಯಿತು. ಪೌರ ಕಾರ್ಮಿಕರಿಗೆ ನಡೆದ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸ ಲಾಯಿತು. ತೀರ್ಪುಗಾರರಾಗಿ ಮಂಜುನಾಥ್ ಕಾರ್ಯ ನಿರ್ವಹಿಸಿದ್ದರು.