ಮಡಿಕೇರಿ, ಸೆ.೩೦: ಮಡಿಕೇರಿ ದಸರಾ ಸಮಿತಿ, ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಏರ್ಪಡಿಸಲಾಗಿರುವ ಬಹುಭಾಷಾ ಕವಿಗೋಷ್ಠಿ ಅಧ್ಯಕ್ಷರಾಗಿ ಜಿಲ್ಲೆಯ ಹಿರಿಯ ಚುಟುಕು ಕವಿ, ಕುಶಾಲನಗರದ ಹಾ.ತಿ. ಜಯಪ್ರಕಾಶ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಕವಿಗೋಷ್ಠಿ ಸಮಿತಿ ಸಭೆಯಲ್ಲಿ ಜಯಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕವಿಗೋಷ್ಠಿ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಎನ್.ನಾಸಿರ್ ಅವರು ತಿಳಿಸಿದ್ದಾರೆ.