ಸೋಮವಾರಪೇಟೆ, ಸೆ. ೩೦: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೯.೪೫ಲಕ್ಷ ವೆಚ್ಚದಲ್ಲಿ ನಿರ್ಮಿಸ ಲಾಗಿರುವ ಘನತಾಜ್ಯ ವಿಲೇವಾರಿ ಘಟಕವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ನಿಗದಿತ ವಾಹನಗಳಲ್ಲಿ ಹಾಕಬೇಕು. ಅದರಲ್ಲೂ ಪ್ಲಾಸ್ಟಿಕ್‌ಗಳು ಎಷ್ಟೆ ವರ್ಷವಾದರೂ ಕರಗದ ಕಾರಣ ಕಸದ ಬುಟ್ಟಿಗಳಲ್ಲಿ ಹಾಕುವ ಮೂಲಕ ಪರಿಸರವನ್ನು ಸಂರಕ್ಷಿಸುವ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಆಡಳಿತದೊಂದಿಗೆ

(ಮೊದಲ ಪುಟದಿಂದ) ಸಹಕರಿಸಬೇಕು ಎಂದು ಮನವಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಕುಡಿಯುವ ನೀರು ಮತ್ತು ಕಸ ವಿಲೇವಾರಿಗೆ ವಿಶೇಷ ಆದ್ಯತೆ ನೀಡಿದ್ದಾರೆ. ಹೀಗಾಗಿ ಕೊಡಗು ಜಿಲ್ಲೆಗೆ ಜಲ್‌ಜೀವನ್ ಮಿಷನ್ ಯೋಜನೆಯಡಿ ರೂ. ೩೦೦ ಕೋಟಿ ಮತ್ತು ಘನತಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕಾಗಿ ರೂ. ೪೦ ಕೋಟಿ ಅನುದಾನ ಬಿಡುಗಡೆ ಯಾಗಿದೆ ಎಂದರು. ಈ ಸಂದರ್ಭ ರೂ. ೨ ಲಕ್ಷ ವೆಚ್ಚದಲ್ಲಿ ನವೀಕರಿಸ ಲಾಗಿರುವ ಡಿಜಿಟಲ್ ಗ್ರಂಥಾಲ ಯವನ್ನು ಶಾಸಕರು ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ಕೆ. ರಘು, ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಮಾಜಿ ಅಧ್ಯಕ್ಷ ಎಂ.ಪಿ. ಮುತ್ತಣ್ಣ, ಮಾಜಿ ಸದಸ್ಯ ಬಿ.ಬಿ. ಸತೀಶ್, ಗ್ರಾ.ಪಂ. ಉಪಾಧ್ಯಕ್ಷ ಶುಭಾರಾಣಿ, ಅಭಿವೃದ್ಧಿ ಅಧಿಕಾರಿ ರಜನಿ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಎಸ್.ಪಿ. ಪೊನ್ನಪ್ಪ, ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷರುಗಳಾದ ಎಂ.ಪಿ. ಜೋಯಪ್ಪ, ಚಿದಾನಂದ, ಬೆಳ್ಯಪ್ಪ, ಗ್ರಾ.ಪಂ. ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.