ಕುಶಾಲನಗರ, ಸೆ. ೩೦: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವತಿಯಿಂದ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಂದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಿತು. ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದ ಮೇಳವನ್ನು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜು ಉದ್ಘಾಟಿಸಿದರು. ಮೇಳದಲ್ಲಿ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೦ಕ್ಕೂ ಅಧಿಕ ಸ್ವ ಸಹಾಯ ಸಂಘಗಳ ಮಳಿಗೆಗಳಲ್ಲಿ ವಿವಿಧ ರೀತಿಯ ವಸ್ತು ಪ್ರದರ್ಶನ ನಡೆಯಿತು.

ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಜಗದೀಶ್, ಒಕ್ಕೂಟದ ನಿರ್ದೇಶಕ ಜಗನಾಥ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರುಗಳು ಇದ್ದರು.