ಚೆಟ್ಟಳ್ಳಿ, ಸೆ. ೩೦: ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ನೆರವೇರಿತು.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶ್ರಮದ ಅನುಭವ ಹಾಗೂ ಸಾಮಾಜಿಕ ಸೇವಾ ಮನೋಭಾವ, ವ್ಯಕ್ತಿತ್ವ ವಿಕಸನ ಹಾಗೂ ರಾಷ್ಟç ಪ್ರೇಮವನ್ನು ಮೈಗೂಡಿಸಿಕೊಳ್ಳು ವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಚೆಟ್ಟಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪನವರು ವಿದ್ಯಾರ್ಥಿಗಳು ಸಮಾಜದ ಆಗುಹೋಗುಗಳ ಬಗ್ಗೆ ಜಾಗೃತಿ ಮನೋಭಾವವನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚೆಟ್ಟಳ್ಳಿ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷÀ ಪೇರಿಯನ ಜಯಾನಂದ, ಉಪಾಧ್ಯಕ್ಷ ಸೋಮೆಯಂಡ ದಿಲೀಪ್ ಅಪ್ಪಚ್ಚು, ಸಂಚಾಲಕ ಮುಳ್ಳಂಡ ರತ್ತುಚಂಗಪ್ಪ, ಶಾಲಾ ಮುಖ್ಯೋಪಧ್ಯಾಯ ಸತ್ಯನಾರಾಯಣ, ಮಂಗಳ ಸಭಾಂಗಣದ ಕಾರ್ಯದರ್ಶಿ ಬಟ್ಟೀರ ಕಾಳಪ್ಪ ಹಾಗೂ ಕಂಡಕೆರೆ ಶಾಲೆಯ ಮುಖ್ಯ ಶಿಕ್ಷಕ ಧನುಪ್ರಕಾಶ್, ಸಾಮಾಜಿಕ ಕಾರ್ಯಕರ್ತÀ ತಿಮ್ಮಪ್ಪಯ್ಯ, ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಟಿ. ಮುತ್ತಪ್ಪ, ಉಪಾಧ್ಯಕ್ಷೆÀ ಬಿ.ಆರ್. ವಿಮಲಾಕ್ಷಿ, ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಚೆನ್ನಮ್ಮ ಸಂಸ್ಥೆಯ ಪ್ರಾಂಶುಪಾಲ ಸಿ.ಜಿ. ಮಂದಪ್ಪ ವಹಿಸಿದ್ದರು. ಶಿಬಿರಾಧಿಕಾರಿ ಮೋಹನ್ ಹೆಗಡೆ ಸ್ವಾಗತಿಸಿ, ಉಪನ್ಯಾಸಕಿ ಪ್ರಮೀಳಾ ನಿರೂಪಿಸಿ, ವಂದಿಸಿದರು. ಕಾಲೇಜಿನ ಉಪನ್ಯಾಸಕರುಗಳಾದ ಮನೋಹರ್ ಹಾಗೂ ರಮ್ಯಾ ಪಾಲ್ಗೊಂಡಿದ್ದರು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.