ಸುಂಟಿಕೊಪ್ಪ: ಹಟ್ಟಿಹೊಳೆ ನಿರ್ಮಲ ವಿದ್ಯಾ ಭವನ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢ ಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪ್ರಥಮ, ಬಾಲಕಿಯರ ಥ್ರೋಬಾಲ್ ದ್ವಿತೀಯ, ಹಾಕಿಯಲ್ಲಿ ಬಾಲಕ ಹಾಗೂ ಬಾಲಕಿಯರು ಪ್ರಥಮ ಸ್ಥಾನ ಪಡೆದಿದ್ದಾರೆ. ಮೇಲಾಟದಲ್ಲಿ ಚಕ್ರ ಎಸೆತ ನಿತಿನ್‌ಕುಮಾರ್ ಎಸ್.ಕೆ ಪ್ರಥಮ ಶಾಟ್‌ಪುಟ್ ನಿತಿನ್‌ಕುಮಾರ್ ಎಸ್.ಕೆ. ಹಾಗೂ ದಾಕ್ಷಾಯಿಣಿ ಪ್ರಥಮ, ಓಟದ ಸ್ಪರ್ಧೆಯಲ್ಲಿ ಅಕ್ಷಯ್ ಎಸ್.ಪಿ. ೮೦೦ ಮೀ ಮತ್ತು ೧೫೦೦ ಮೀ. ದ್ವಿತೀಯ, ೨೦೦ ಮೀ. ನಲ್ಲಿ ಪ್ರಥಮ ಮತ್ತು ಪ್ರಯಾ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಆಲೂರು ಸಿದ್ದಾಪುರದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ, ಬಾಲಕಿಯರ ಹಾಕಿಯಲ್ಲಿ ಪ್ರಥಮ, ಬಾಲಕ ಹಾಗೂ ಬಾಲಕಿಯರ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನವನ್ನು ಮತ್ತು ಮೇಲಾಟದ ಸ್ಪರ್ಧೆಯಲ್ಲಿ ನಿತಿನ್‌ಕುಮಾರ್ ಎಸ್.ಕೆ. ಚಕ್ರ ಎಸೆತದಲ್ಲಿ ಪ್ರಥಮ ಹಾಗೂ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.ಸೋಮವಾರಪೇಟೆ: ವಲಯ ಮಟ್ಟದ ಕ್ರೀಡಾಕೂಟ ಮತ್ತು ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಜಯ ಗಳಿಸಿದ ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ, ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಚೆಸ್‌ನಲ್ಲಿ ಪ್ರಥಮ ಮತ್ತು ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ರಾಹುಲ್‌ರಾಜ್, ಲಾಂಗ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ಚಿನ್ಮಯಿ, ಟ್ರಿಪಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದ ಸಿನಾನ್, ೮೦೦ಮೀ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ ಸುಪ್ರೀತ್, ಕಬಡ್ಡಿ ಮತ್ತು ಹಾಕಿ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಗಳಿಸಿದ ತಂಡದ ಆಟಗಾರರಿಗೆ ಬಹುಮಾನ ವಿತರಿಸಲಾಯಿತು.

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸೌಮ್ಯ, ಲಘು ಸಂಗೀತದಲ್ಲಿ ಪ್ರಥಮ ಸ್ಥಾನ ಗಳಿಸಿದ ಅನುಶ್ರೀ, ಅಭಿನಯಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಧನಲಕ್ಷಿö್ಮ, ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವೈಭವಿ ಇವರುಗಳನ್ನು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ವೆಂಕಟೇಶ್, ಮುಖ್ಯೋಪಾಧ್ಯಾಯಿನಿ ಪಿ.ಕೆ. ಲಕ್ಷಿö್ಮ ಅವರುಗಳು ಬಹುಮಾನ ವಿತರಿಸಿದರು.

ನಾಪೋಕ್ಲು: ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಹಂತದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ವಿಜೇತರಾಗಿದ್ದಾರೆ. ಹೋಬಳಿ ಮಟ್ಟದ ಸ್ಪರ್ಧೆಗಳಲ್ಲಿ ಹಾಕಿ, ಕಾಲ್ಚೆಂಡು, ವಾಲಿಬಾಲ್, ಟೇಬಲ್ ಟೆನ್ನಿಸ್, ಚೆಸ್, ಷಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ೩೦೦೦ ಮೀ., ೮೦೦ ಮೀ., ೪೦೦ ಮೀ., ೨೦೦ ಮೀ.. ೧೦೦ ಮೀ. ೪x೧೦೦ ಮೀಟರ್ ರಿಲೆ, ಎತ್ತರ ಜಿಗಿತ, ಭಾರದ ಗುಂಡು ಎಸೆತ, ದೂರ ಜಿಗಿತ, ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ.

ಜಿಲ್ಲಾ ಮಟ್ಟದ ಕಾಲ್ಚೆಂಡು ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಐವರು ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದಲ್ಲಿ ೧೦೦ ಮೀ. ಓಟದ ಸ್ಪರ್ಧೆ, ಉದ್ದಜಿಗಿತ ಮತ್ತು ೪x೧೦೦ ಮೀಟರ್ ರಿಲೆ ಸ್ಪರ್ಧೆಗಳಲ್ಲಿ ಕ್ರಮವಾಗಿ ಪ್ರಥಮ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ್ದಾರೆ. ಹಾಕಿ ತಂಡವು ಜಿಲ್ಲಾ ಮಟ್ಟದಲ್ಲಿ ಪಾಲ್ಗೊಳ್ಳಲಿದೆ ಎಂದು ಶಾಲೆಯ ಪ್ರಾಂಶುಪಾಲೆ ಕಲ್ಯಾಟಂಡ ಶಾರದಾ ತಿಳಿಸಿದ್ದಾರೆ.ಮಡಿಕೇರಿ: ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಸಂತ ಅಂತೋಣಿ ಪ್ರೌಢಶಾಲೆಯ ವಿದ್ಯಾರ್ಥಿಗಳು ೪-೦ ಗೋಲುಗಳ ಅಂತರದಲ್ಲಿ ಮಡಿಕೇರಿ ತಂಡವನ್ನು ಸೋಲಿಸುವುದರ ಮೂಲಕ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಂಡದ ವ್ಯವಸ್ಥಾಪಕರಾಗಿ ವಿನೋದ್, ಪವನ್ ಕುಮಾರ್ ಹಾಗೂ ಶಂಭು ಕಾರ್ಯಪ್ಪ ಅವರು ಕಾರ್ಯನಿರ್ವಹಿಸಿದರು.ಕುಶಾಲನಗರ: ಕುಶಾಲನಗರದ ಸರಕಾರಿ ಪದವಿಪೂರ್ವ ಕಾಲೇಜು, ಬಾಲಕ ಬಾಲಕಿಯರು ಪೊನ್ನಂಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಪ್ರಯುಕ್ತ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತೀಶ್ ಬಾಬು, ಉಪನ್ಯಾಸಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪನ್ಯಾಸಕ ನಾಗೇಶ್ ಅವರು ತರಬೇತುದಾರರಾಗಿ ಕಾರ್ಯನಿರ್ವಹಿಸಿದರು.