ನಾಪೋಕ್ಲು, ಸೆ. ೩೦: ನಾಪೋಕ್ಲು ಹೋಬಳಿಯ ಬಲ್ಲಮಾವಟಿ ಹಾಗೂ ನೆಲಜಿ ವೃತ್ತದ ವ್ಯಾಪ್ತಿಯಲ್ಲಿ ಕಾಫಿ, ಅಡಿಕೆ, ಕರಿಮೆಣಸು ಬೆಳೆ ಹಾನಿಯಾದ ಬಗ್ಗೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಾಫಿ ಬೋರ್ಡ್ ಇಲಾಖೆಯವರೊಂದಿಗೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಾನಿಯ ಪರಿಶೀಲನೆ ಮಾಡಲಾಯಿತು.
ಮಡಿಕೇರಿ ತಾಲೂಕಿನ ಸಂಪಾಜೆ ಹೋಬಳಿಯ ಹೆರವನಾಡು, ಮದೆ, ಕಾಟಕೇರಿ ಹಾಗೂ ಜೋಡುಪಾಲ ವ್ಯಾಪ್ತಿಯಲ್ಲಿ ತೋಟಗಾರಿಕೆ ಇಲಾಖೆ, ಕಾಫಿ ಮಂಡಳಿ ಹಾಗೂ ಕೃಷಿ ಇಲಾಖೆ ಅಧಿಕಾರಿ ಇವರು ಬೆಳೆ ನಷ್ಟ ಪರಿಹಾರ ಸಂಬAಧ ಜಂಟಿ ಸ್ಥಳ ತನಿಖೆ ನಡೆಸಿದ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕರು. ಗ್ರಾಮ ಲೆಕ್ಕಾಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಸಂಪಾಜೆ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಬೆಳೆ ನಷ್ಟ ಪರಿಹಾರ ಸಂಬAಧ ಜಂಟಿ ಸ್ಥಳ ತನಿಖೆ ನಡೆಸಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ.