ಕೂಡಿಗೆ, ಸೆ. ೩೦: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ಕಾರ್ಯಾಲಯದ ಸಭಾಂಗಣದ ಕಟ್ಟಡದಲ್ಲಿ ಆರೋಗ್ಯ ಉಪ ಕೇಂದ್ರಕ್ಕೆ ಹೊಂದಿಕೊAಡAತೆ ಶಿಶು ಆರೋಗ್ಯ ಕೇಂದ್ರವನ್ನು ತೆರೆÀಯಲಾಗಿದೆ.
ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜ್ ನೆರವೇರಿಸಿ ದರು. ಮಕ್ಕಳ ತಾಯಂದಿರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರಥಮವಾಗಿ ಕೇಂದ್ರ ಆರಂಭ ಮಾಡಲಾಗಿದೆ ಇದರ ಪ್ರಯೋಜನವನ್ನು ತಾಯಂದಿರು ಬಳಕೆ ಮಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಮ್ಮ ಸೇರಿದಂತೆ ಸರ್ವ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸುಮೇಶ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಮಕ್ಕಳ ತಾಯಂದಿರು ಹಾಜರಿದ್ದರು.