ಮಡಿಕೇರಿ, ಅ. ೧: ಮಡಿಕೇರಿ ನಗರ ದಸರಾ ಉತ್ಸವದಲ್ಲಿ ತಾ. ೨ ರಂದು (ಇಂದು) ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕರ್ನಾಟಕ ಜಾನಪದ ಪರಿಷತ್‌ನ ಕೊಡಗು ಘಟಕದ ಆಶ್ರಯದಲ್ಲಿ ಜಾನಪದ ದಸರಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ ೧೦.೩೦ ಗಂಟೆಗೆ ಜಾನಪದ ಪರಿಕರಗಳ ಪ್ರದರ್ಶನ ಜನಪದ ಕಲೆಗಳ ಪ್ರದರ್ಶನ ನಡೆಯಲಿದೆ.
ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್, ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷರಾದ ಪ್ರೊ ಹಿ.ಶಿ. ರಾಮಚಂದ್ರೇಗೌಡ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಇತರರು ಪಾಲ್ಗೊಳ್ಳಲಿದ್ದಾರೆ.