ಮಡಿಕೇರಿ ಅ.೧ : ಕುಶಾಲನಗರದ ಚಿಕ್ಕಅಳುವಾರದಲ್ಲಿ ಪ್ರಾರಂಭವಾಗಲಿ ರುವ ಕೊಡಗು ವಿಶ್ವವಿದ್ಯಾನಿಲಯದ ಕೇಂದ್ರ ಕಚೇರಿಯನ್ನು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ತೆರೆಯುವ ಬೇಡಿಕೆಗೆ ಸಕರಾತ್ಮಕವಾಗಿ ಸ್ಪಂದಿಸುವುದಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಭರವಸೆ ನೀಡಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠ ಪ್ರಸಾರಾಂಗ ಮತ್ತು ಕೊಡವ ಮಕ್ಕಡ ಕೂಟದ ಜಂಟಿ ಆಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ ಪಟ್ಟೋಲೆ ಪಳಮೆ (ಕೊಡವ-ಕನ್ನಡ-ಇಂಗ್ಲೀಷ್ ಆವೃತ್ತಿ) ಕೃತಿ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಡಗಿನಲ್ಲಿ ಕೊಡವತನ ಉಳಿಯಬೇಕು, ಆ ನಿಟ್ಟಿನಲ್ಲಿ ಎಲ್ಲಾ ಸಹಕಾರವನ್ನು ನೀಡಲಾಗುವುದು. ಕೊಡಗಿನ ಶೈಕ್ಷಣಿಕ ಪ್ರಗತಿಯ ಬೇಡಿಕೆಗೆ ಸ್ಪಂದಿಸುವುದಾಗಿ ತಿಳಿಸಿದರು.

ಕೃತಿ ಬಿಡುಗಡೆ ಮಾಡಿ ಮಾತ ನಾಡಿದ ಸಾಹಿತಿ ಬಾಚರಣಿಯಂಡ ಅಪ್ಪಣ್ಣ, ಪಟ್ಟೋಲೆ ಪಳಮೆ ಕೃತಿಯಲ್ಲಿ ಕೊಡವರ ಪ್ರಾಚೀನ ಕಾಲದ ಪದ್ಧತಿ, ಪರಂಪರೆ, ಸಂಸ್ಕೃತಿಯನ್ನು ಸಂಗ್ರಹಿಸಲಾಗಿದ್ದು, ಕಾವೇರಿ ಪುರಾಣ, ವಿವಾಹ ಪದ್ಧತಿ, ಸಾವಿನ ಪದ್ಧತಿ, ಕೊಡಗಿನ ಐತಿಹಾಸಿಕ ವಿವರ, ಕೊಡವ ಗಾದೆ, ಒಗಟು, ಮೂಢ ನಂಬಿಕೆ ಸೇರಿದಂತೆ ಹುಟ್ಟಿನಿಂದ ಸಾವಿನವರೆಗಿನ ಎಲ್ಲಾ ವಿವರಗಳನ್ನು ನೀಡಲಾಗಿದೆ. ಇದರಿಂದ ಕೊಡಗಿನ ಸಂಸ್ಕೃತಿ, ಆಚಾರ-ವಿಚಾರಗಳು ಇನ್ನೂ ಜೀವಂತವಾಗಿ ಉಳಿಯಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಕೊಡವ ಮಕ್ಕಡ ಕೂಟದಿಂದ ಏಳು ವರ್ಷ ನಡೆಸಲಾದ ಆಟ್ ಪಾಟ್ ಪಡಿಪು ಕಾರ್ಯಕ್ರಮದಲ್ಲಿ ಪಟ್ಟೋಲೆ ಪಳಮೆ ಪುಸ್ತಕವನ್ನು ವಿದ್ಯಾರ್ಥಿಗಳಿಗೆ ಹಾಗೂ ೪ ಸಾವಿರ ಆಟ್‌ಪಾಟ್ ಪಡಿಪು ಪುಸ್ತಕಗಳನ್ನು ಶಾಲೆಗಳಿಗೆ ಉಚಿತವಾಗಿ ನೀಡುವ ಮೂಲಕ ಯುವ ಪೀಳಿಗೆಗೆ ಕೊಡವ ಆಚಾರ, ವಿಚಾರ, ಪದ್ಧತಿಯನ್ನು ತಿಳಿಸುವ ಕೆಲಸ ಮಾಡಲಾಗಿದೆ ಎಂದರು.

ಚಿಕ್ಕಅಳುವಾರದಲ್ಲಿ ಪ್ರಾರಂಭಿಸ ಲಾಗುವ ಕೊಡಗು ವಿಶ್ವಾವಿದ್ಯಾನಿಲ ಯದ ಕೇಂದ್ರ ಕಚೇರಿಯನ್ನು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತೆರೆಯಲು ಅವಕಾಶ ಕಲ್ಪಿಸುವಂತೆ ಇದೇ ಸಂದರ್ಭ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಿಗೆ ಮನವಿ ಮಾಡಿದರು.

ಮುಂಬೈ ಎಸ್.ಎನ್.ಡಿ.ಟಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ವೀಣಾ ಪೂಣಚ್ಚ ಪಟ್ಟೋಲೆ ಪಳಮೆ ಕೃತಿಯ ಕುರಿತು ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ಪಟ್ಟೋಲೆ ಪಳಮೆ ಕೃತಿಯ ಕೊಡವ-ಕನ್ನಡ-ಇಂಗ್ಲಿಷ್ ಅವೃತ್ತಿಯ ಅನುವಾದಕರಾದ ಬೊವ್ವೇರಿಯಂಡ ನಂಜಮ್ಮ ಮತ್ತು ಚಿಣ್ಣಪ್ಪ ವರ್ಚುವಲ್ ಮೂಲಕ ಮಾತನಾಡಿ ಕೊಡವ ಭಾಷೆ, ಸಂಸ್ಕೃತಿ, ಆಚಾರ, ವಿಚಾರ, ಜನಪದ ಕಲೆಗಳ ಕುರಿತು ಅಭಿಪ್ರಾಯ ಹಂಚಿಕೊAಡರು.

ಪಾಲೆಯAಡ ಕಾವ್ಯ ಪ್ರಾರ್ಥಿಸಿ, ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠದ ಸಂಯೋಜಕಿ ಡಾ. ಎಂ.ಎA. ಮೀನಾಕ್ಷಿ ಸ್ವಾಗತಿಸಿ, ಚೋಕಿರ ಅನಿತಾ ದೇವಯ್ಯ ನಿರೂಪಿಸಿ, ಐಚಂಡ ರಶ್ಮಿ ಮೇದಪ್ಪ ವಂದಿಸಿದರು.