ಕುಶಾಲನಗರ, ಅ. ೧: ಕೊಡಗು ಮೈಸೂರು ಗಡಿಭಾಗದ ಕುಶಾಲನಗರ ಅರಣ್ಯ ತಪಾಸಣಾ ಗೇಟ್ ಬಳಿ ರಸ್ತೆಯಲ್ಲಿ ಇರಿಸಲಾಗಿದ್ದ ಪೊಲೀಸ್ ಬ್ಯಾರಿಕೇಡ್‌ಗಳಿಗೆ ರಾತ್ರಿ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಘಟನೆ ನಡೆದಿದೆ. ಶನಿವಾರ ಮುಂಜಾನೆ ಕುಶಾಲನಗರ ಕಡೆಯಿಂದ ಮೈಸೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ವಾಹನವೊಂದು ಬ್ಯಾರಿಕೇಡ್‌ಗೆ ಡಿಕ್ಕಿಯಾಗಿದೆ. ಇದರಿಂದ ರಸ್ತೆಯಲ್ಲಿದ್ದ ಬ್ಯಾರಿಕೇಡ್ ನಜ್ಜುಗುಜ್ಜಾಗಿದೆ. ಡಿಕ್ಕಿಯಾದ ವಾಹನ ನಿಲ್ಲದೆ ಪರಾರಿಯಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.