ಗೋಣಿಕೊಪ್ಪಲು, ಅ. ೩: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರು ಗೋಣಿಕೊಪ್ಪಲಿನ ಶ್ರೀ ಕಾವೇರಿ ದಸರಾ ಸಮಿತಿಯ ೪೪ನೇ ವರ್ಷದ ಉತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾ. ೫ ರಂದು ಬೆಳಿಗ್ಗೆ ೧೦ ಗಂಟೆಗೆ ನಾಡಹಬ್ಬ ದಸರಾ ಸಮಿತಿಯ ಜಿಲ್ಲಾಮಟ್ಟದ ಸ್ಥಬ್ಧಚಿತ್ರ ಮೆರವಣಿಗೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಸಂಜೆ ಆರು ಗಂಟೆಗೆ ಶ್ರೀ ಕಾವೇರಿ ದಸರಾ ಶ್ರೀ ಚಾಮುಂಡೇಶ್ವರಿಯ ವಿಸರ್ಜನಾ ಪೂಜೆಯಲ್ಲಿ ಪಾಲ್ಗೊಂಡು ನಂತರ ನಡೆಯುವ ೪೪ನೇ ವರ್ಷದ ದಸರಾ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.