ಕೂಡಿಗೆ, ಅ. ೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿ ಶ್ರೀ ಮಾತಾದೇವಿಯ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ವಿಶೇಷ ಪೂಜೆ ಹೋಮ ಹವನಗಳೊಂದಿಗೆ ಮೃತ್ಯುಂಜಯ ಹೋಮ ನಡೆಯಿತು,
ಮೊದಲಿಗೆ ಗಣಪತಿ ಹೋಮ ನಂತರ ಚಂಡಿಕಾ ಹೋಮ ಸೇರಿದಂತೆ ವಿವಿಧ ಸೇವಾ ಪೂಜಾ ಕಾರ್ಯಕ್ರಮಗಳು ನಡೆದು ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ಪೂಜಾ ಕೈಂಕರ್ಯಗಳನ್ನು ಕೇರಳದ ಶ್ರೀನಿಧಿ ಮತ್ತು ಪಣಿಕ್ಕರ್ ಪಂಡಿತರ ತಂಡ ನೆರವೇರಿಸಿದರು.
ಪೂಜಾ ಕಾರ್ಯಕ್ರಮದಲ್ಲಿ ಹುದುಗೂರು ಮದಲಾಪುರ ಸೀಗೆಹೊಸೂರು ಹಾರಂಗಿ ಕುಶಾಲನಗರ ಕೂಡಿಗೆ ಸುತ್ತ ಮುತ್ತಲಿನ ಭಕ್ತಾದಿಗಳು ಭಾಗವಹಿಸಿದ್ದರು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ಕಾರ್ಯದರ್ಶಿ ಸುರೇಶ್ ಸೇರಿದಂತೆ ಸಮಿತಿಯ ಎಲ್ಲಾ ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.