ಮಡಿಕೇರಿ, ಅ. ೨: ಪ್ರಸಕ್ತ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಯುಪಿಎಸ್‌ಸಿ, ಕೆಎಎಸ್, ಗ್ರೂಪ್-ಸಿ, ಬ್ಯಾಂಕಿAಗ್, ಎಸ್‌ಎಸ್‌ಸಿ, ಆರ್‌ಆರ್‌ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ತಾ. ೪ ರವರೆಗೆ ಅವಧಿ ವಿಸ್ತರಿಸಲಾಗಿದೆ.
ಅರ್ಜಿಯನ್ನು ಇಲಾಖೆಯ ಅಧಿಕೃತ ಜಾಲತಾಣ ತಿತಿತಿ.sತಿ.ಞಚಿಡಿ.ಟಿiಛಿ.iಟಿ ರಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೨೫೫೩೧. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-೦೮೨೭೨-೨೨೩೫೫೨. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-೦೮೨೭೬-೨೮೧೧೧೫. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.