ಮಡಿಕೇರಿ, ಅ. ೨: ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನ, ಭೂ ರಾಜಕೀಯ ಸ್ವಾಯತ್ತತೆ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ತಾ. ೩ ರಂದು (ಇಂದು) ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಯಲಿದೆ ಎಂದು ಸಿ.ಎನ್.ಸಿ ಅಧ್ಯಕ್ಷ ಎನ್.ಯು ನಾಚಪ್ಪ ಅವರು ತಿಳಿಸಿದ್ದಾರೆ. ಬೆಳಿಗ್ಗೆ ೧೦.೩೦ಕ್ಕೆ ಸತ್ಯಾಗ್ರಹ ನಡೆಯಲಿದ್ದು, ನಂತರ ಜಿಲ್ಲಾಡಳಿತದ ಮೂಲಕ ರಾಷ್ಟçಪತಿ ದ್ರೌಪದಿ ಮುರ್ಮು ಅವರಿಗೆ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಗುವುದಾಗಿ ಅವರು ತಿಳಿಸಿದ್ದಾರೆ.