ಮಡಿಕೇರಿ, ಅ.೩: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ವಿಭಾಗದಲ್ಲಿ ಕೊಡಗು ಜಿಲ್ಲಾ ಪಂಚಾಯಿತಿಗೆ ರಾಷ್ಟç ಮಟ್ಟದ ಪ್ರಶಸ್ತಿ ದೊರೆತಿದೆ.

ಕೊಡಗು ಜಿಲ್ಲೆಯು ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ, ದ್ರವ ತ್ಯಾಜ್ಯ ನಿರ್ವಹಣೆ, ಶೌಚಾಲಯಗಳ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮಗಳು, ಸುಜಲಾಂ ೨.೦ ಅಡಿ ಐಎಂಐಎಸ್ ನಮೂದು ಮುಂತಾದ ಚಟುವಟಿಕೆಗಳಲ್ಲಿ ರಾಜ್ಯದಲ್ಲಿಯೇ ಉತ್ತಮವಾಗಿ ಕಾರ್ಯನಿರ್ವಹಿಸಿದೆ.

ಈ ಪರಿಣಾಮಕಾರಿ ಅಂಶಗಳನ್ನು ಗಮನಿಸಿರುವ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ೮ನೇ ವರ್ಷದ ವಾರ್ಷಿಕೋತ್ಸವದ ನಿಮಿತ್ತ ಅಕ್ಟೋಬರ್ ೨ ರಂದು ಮಹಾತ್ಮ ಗಾಂಧೀಜಿ ಅವರ ಜನ್ಮ ದಿನದ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಿದ್ದ ಸ್ವಚ್ಛ ಭಾರತ್ ದಿವಸ್ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ, ರಾಷ್ಟçಪತಿಯವರಿಂದ ಪ್ರಶಂಸನಾ ಪತ್ರ ಸ್ವೀಕರಿಸಿದರು.

ಕೊಡಗು ಜಿಲ್ಲೆಯಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ ವಿವಿಧ ಘಟಕಾಂಶಗಳಡಿ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಹಾಗೂ ಸುಜಲಾಂ ೨.೦ ಆಂದೋಲನದಡಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಭಂವರ್ ಸಿಂಗ್ ಮೀನಾ ಅಭಿಪ್ರಾಯಿಸಿದ್ದಾರೆ.