ಮಡಿಕೇರಿ, ಅ. ೨: ಪ್ರಸಕ್ತ ಸಾಲಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಕೊಡಗು ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಮಟ್ಟದಲ್ಲಿ “ಗಾಂಧಿ ಜಯಂತಿ” ಕಾರ್ಯಕ್ರಮವನ್ನು ತಾ. ೧೪ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಶಿಶು ಕಲ್ಯಾಣ ಸಂಸ್ಥೆ(ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹತ್ತಿರ)ಯಲ್ಲಿ ಸ್ಪರ್ಧೆ ನಡೆಯಲಿದೆ. ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೆöÊರ್ಯ, ಭರವಸೆ ದೃಢವಾದ ವ್ಯಕ್ತಿತ್ವ, ವಿಚಾರವಂತಿಕೆ, ಕಲಾಪ್ರತಿಭೆಯನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ೩ ವಿಭಾಗಗಳಾಗಿ ವಿಂಗಡಿಸಿ ೫-೮, ೯-೧೨, ೧೩-೧೬ ವರ್ಷ ಮಕ್ಕಳಿಗೆ ಚಿತ್ರಕಲೆ, ೯-೧೨, ೧೩-೧೬ ವರ್ಷ ಮಕ್ಕಳಿಗೆ ಪ್ರಬಂಧ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಈ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಕ್ಕಳು ತಾ. ೭ ರೊಳಗೆ ದೂ. ೮೬೧೮೮೬೧೫೦೫, ೬೩೬೩೨೮೫೬೮೫ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಸರು ನೋಂದಾಯಿಸಿ ಕೊಳ್ಳುವಂತೆ ತಿಳಿಸಿದೆ. ಕಚೇರಿಯಲ್ಲಿ ಹೆಸರು ನೋಂದಾಯಿಸಿದ ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎನ್. ಮಂಜುನಾಥ್ ತಿಳಿಸಿದ್ದಾರೆ.