ಮಡಿಕೇರಿ, ಅ.೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತಿç ಅವರ ಜನ್ಮ ವರ್ಷಾಚರಣೆಯನ್ನು ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರು ಶಾಸ್ತಿç ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ವಕೀಲರಾದ ಎಂ.ಎ.ನಿರAಜನ, ತಹಶೀಲ್ದಾರ್ ಮಹೇಶ್, ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಮಾತನಾಡಿ ಗಾಂಧೀಜಿ ಅವರ ತತ್ವಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಆ ದಿಸೆಯಲ್ಲಿ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು. ಸತ್ಯ, ಅಹಿಂಸೆ ಮತ್ತು ಶಾಂತಿ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟರು. ಸತ್ಯ ಶೋಧನೆಯಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂಬುದನ್ನು ಸಾರಿ ಹೇಳಿದ್ದರು. ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತಿç ಅವರು ಪ್ರಧಾನಮಂತ್ರಿ ಆಗಿದ್ದ ಅವಧಿಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಿ ಆಡಳಿತ ನಡೆಸಿದರು ಎಂದರು. ವಕೀಲ ಎಂ.ಎ.ನಿರAಜನ ಅವರು ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಎಲ್ಲರನ್ನೂ ಒಟ್ಟುಗೂಡಿಸಿ ಸ್ವಾತಂತ್ರö್ಯ ಪಡೆಯಲು ಶ್ರಮಿಸಿದರು. ಸ್ವಾತಂತ್ರö್ಯಕ್ಕಾಗಿ ರಾಷ್ಟçದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಿದರು ಎಂದರು.

ಸತ್ಯ ಮತ್ತು ಅಹಿಂಸೆಯ ಮೂಲಕ ಜೀವಿಸಿದ ವ್ಯಕ್ತಿ ಗಾಂಧೀಜಿ ಅವರಾಗಿದ್ದಾರೆ. ಜೀವನದ ಪ್ರತಿಯೊಂದು ಸಮಸ್ಯೆಗೂ ಶಾಂತಿ ಅಹಿಂಸೆಯ ಮೂಲಕ ಮುಕ್ತ ಮಾರ್ಗ ಪಡೆಯಬಹುದಾಗಿದೆ ಎಂದು ತೋರಿಸಿಕೊಟ್ಟವರು. ಲಾಲ್ ಬಹುದ್ದೂರ್ ಶಾಸ್ತಿç ಅವರು ‘ಜೈಜವಾನ್ ಜೈಕಿಸಾನ್’ ಸಂದೇಶ ಸಾರುವ ಮೂಲಕ ರಾಷ್ಟçದಲ್ಲಿ ಸೇನೆ ಹಾಗೂ ಕೃಷಿಯ ಮಹತ್ವದ ಬಗ್ಗೆ ವರ್ಣಿಸಿದ್ದಾರೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರು ವಿಶ್ವದಲ್ಲಿ ನಿರಂತರ ಶಾಂತಿಗಾಗಿ ಶ್ರಮಿಸಿದರು. ಗಾಂಧೀಜಿ ಅವರು ಸತ್ಯ ದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರö್ಯ

(ಮೊದಲ ಪುಟದಿಂದ) ತಂದುಕೊಟ್ಟರು. ಗಾಂಧೀಜಿಯವರ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.

ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ, ತಹಶೀಲ್ದಾರ್ ಪಿ.ಎಸ್.ಮಹೇಶ್, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಘಟಕರಾದ ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ.ಉಷಾರಾಣಿ ಇತರರು ಇದ್ದರು. ಗೈಡ್ಸ್ನ ವಿದ್ಯಾರ್ಥಿನಿಯರು ಮಹಾತ್ಮ ಗಾಂಧೀಜಿಯವರಿಗೆ ಪ್ರಿಯವಾದ ಹಾಡುಗಳನ್ನು ಹಾಡಿದರು. ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

ಜಿಲ್ಲಾಡಳಿತ, ಸರ್ವೋದಯ ಸಮಿತಿ ಹಾಗೂ ನಗರಸಭೆ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಶಾಸಕÀ ಎಂ.ಪಿ.ಅಪ್ಪಚ್ಚು ರಂಜನ್ ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಸರ್ವೋದಯ ಸಮಿತಿ ಮತ್ತು ಲಯನ್ಸ್ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ದೇಶಭಕ್ತಿಗೀತೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಇದೇ ಸಂದರ್ಭದಲ್ಲಿ ವಿತರಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಅಹಿಂಸೆಯ ಮೂಲಕ ಸ್ವಾತಂತ್ರö್ಯ ತಂದುಕೊಟ್ಟ ಗಾಂಧೀಜಿಯವರ ಅಹಿಂಸಾ ಮಾರ್ಗಕ್ಕೆ ಇಡೀ ವಿಶ್ವವೇ ಅವರನ್ನು ಶಾಂತಿದೂತ ಎಂದು ಗುರುತಿಸಿದೆ ಎಂದರು. ಮಹಾತ್ಮ ಗಾಂಧೀಜಿ ಅವರು ‘ನನ್ನ ಜೀವನವೇ, ನನ್ನ ಸಂದೇಶ’ ಎಂಬುದನ್ನು ಸಾರಿದರು. ಭಾರತ ಸ್ವಾತಂತ್ರö್ಯಕ್ಕಾಗಿ ಹೋರಾಡಿದರು ಎಂದು ನುಡಿದರು. ಮಹಾತ್ಮ ಗಾಂಧಿಯವರ ಸರಳ ಮತ್ತು ಶಾಂತಿಯುತ ಜೀವನವನ್ನು ನಾವೆಲ್ಲರೂ ಅನುಸರಿಸುವಂತಾಗಬೇಕು. ಮಹಾತ್ಮ ಗಾಂಧೀಜಿ ಅವರು ನಡೆದು ಬಂದ ಹಾದಿಯಲ್ಲಿ ಮುನ್ನಡೆಯಬೇಕು ಎಂದರು.

ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ, ತಹಶೀಲ್ದಾರ್ ಪಿ.ಎಸ್.ಮಹೇಶ್, ನಗರಸಭೆ ಪೌರಾಯುಕ್ತರಾದ ವಿಜಯ, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ.ಮ್ಯಾಥ್ಯು, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕಾರ್ಯದರ್ಶಿ ಟಿ.ಎಂ.ಮುದ್ದಯ್ಯ, ಸದಸ್ಯರು ಹಾಗೂ ಕೊಡಗು ಜಿಲ್ಲಾ ಜಾನಪದ ಪರಿಷತ್ ಸದಸ್ಯರು ಮಹಾತ್ಮ ಗಾಂಧೀಜಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.