ಮಡಿಕೇರಿ, ಅ. ೨: ಮಡಿಕೇರಿ ನಗರ ದಸರಾ ಸಮಿತಿ, ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಬಹುಭಾಷಾ ಕವಿಗೋಷ್ಠಿ ತಾ. ೪ರಂದು ನಾಳೆ ನಡೆಯಲಿದೆ.

ನಗರದ ಗಾಂಧಿ ಮೈದಾನದಲ್ಲಿನ ಕಲಾ ಸಂಭ್ರಮ ವೇದಿಕೆಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಉದ್ಘಾಟಿಲಿದ್ದಾರೆ. ಕವಿಗೋಷ್ಠಿ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕವನ ಸಂಕಲನ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದಸರಾ ಸಮಿತಿ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷ ಕೆ.ಎಸ್. ರಮೇಶ್, ಉಪಾಧ್ಯಕ್ಷೆ ಸವಿತಾ ರಾಕೇಶ್, ಪ್ರಧಾನ ಕಾರ್ಯದರ್ಶಿ ಬಿ.ರಾಜೇಶ್ ಯಲ್ಲಪ್ಪ, ಖಜಾಂಚಿ ಕುಟ್ಟನ ಶ್ವೇತಾ ಪ್ರಶಾಂತ್, ಗೌರವ ಕಾರ್ಯದರ್ಶಿ ವಿಜಯ, ಕೊಡಗು ಜಾನಪದ ಪರಿಷತ್ತು ಅಧ್ಯಕ್ಷ ಬಿ.ಜಿ. ಅನಂತಶಯನ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ.ಮುರಳೀಧರ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಸ್ಕೌಟ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಮಡಿಕೇರಿ ತಾಲೂಕು ಜಾನಪದ ಪರಿಷತ್ತು ಅಧ್ಯಕ್ಷ ಅನಿಲ್ ಎಚ್.ಟಿ. ಕನ್ನಡ ಸಾಹಿತ್ಯ ಪರಿಷತ್ತು ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್, ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ, ವೀರಾಜಪೇಟೆಯ ರಾಜೇಶ್ ಪದ್ಮನಾಭ, ಕುಶಾಲನಗರದ ಕೆ.ಎಸ್. ಮೂರ್ತಿ, ಸೋಮವಾರಪೇಟೆಯ ಎಸ್.ಡಿ.ವಿಜೇತ್, ಪೊನ್ನಂಪೇಟೆಯ ಕೋಳೇರ ದಯಾ ಚಂಗಪ್ಪ ಭಾಗವಹಿಸಲಿದ್ದಾರೆ.

ಭಾಗವಹಿಸುವ ಕವಿಗಳು

ಈ ಬಾರಿಯ ಕವಿಗೋಷ್ಠಿಗೆ ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ವಿವಿಧ ಭಾಷೆಗಳಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಕವನಗಳು ಬಂದಿದ್ದವು. ಈ ಪೈಕಿ ಆಯ್ಕೆ ಸಮಿತಿಯವರಿಂದ ಆಯ್ಕೆ ಮಾಡಲಾದ ೬೫ ಕವಿಗಳಿಗೆ ಕವನ ವಾಚನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕವಿಗೋಷ್ಠಿ ಅಧ್ಯಕ್ಷತೆಯನ್ನು ಹಿರಿಯ ಚುಟುಕು ಸಾಹಿತಿ ಹಾ.ತಿ. ಜಯಪ್ರಕಾಶ್ ವಹಿಸಲಿದ್ದಾರೆ ಎಂದು ಕವಿಗೋಷ್ಠಿ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ.ಎನ್.ನಾಸಿರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.