ಹೊದ್ದೂರು, ಅ. ೨: ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ ತಾ. ೪ ರಂದು (ನಾಳೆ) ಬೆಳಿಗ್ಗೆ ೧೦ ಗಂಟೆಗೆ ಹೊದ್ದೂರು ವಾಟೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸಿ. ಸುಬ್ರಮಣಿ ವಹಿಸಲಿದ್ದಾರೆ. ಅತಿಥಿಗಳಾಗಿ ಮಡಿಕೇರಿ ಎಫ್ಎಂಕೆಎAಸಿ ಕಾಲೇಜು ಪ್ರಾಂಶುಪಾಲ ಚೌರೀರ ಜಗತ್ ತಿಮ್ಮಯ್ಯ, ಮೂರ್ನಾಡು ಕೊಡವ ಸಮಾಜ ಅಧ್ಯಕ್ಷ ನೆರವಂಡ ಅನುಪ್ ಉತ್ತಯ್ಯ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ಭಾಗವಹಿಸಲಿದ್ದಾರೆ.
ಮಡಿಕೇರಿ ತಾಲೂಕು ಯುವ ಒಕ್ಕೂಟದ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯ ಕೂಡಂಡ ಸಾಬ ಸುಬ್ರಮಣಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ಕಾರ್ಯಕ್ರಮ ಅಧಿಕಾರಿ ದಮಯಂತಿ ತಿಳಿಸಿದ್ದಾರೆ.