ಮಡಿಕೇರಿ, ಅ. ೨: ಕೋಮು ವಾದದ ಮೂಲಕ ಸಮಾಜವನ್ನು ಒಡೆಯುವ ಷಡ್ಯಂತ್ರಗಳು ನಡೆ ಯುತ್ತಿದ್ದು, ಈ ಬಗ್ಗೆ ಜನ ಜಾಗೃತ ರಾಗಬೇಕು. ಸಮಾಜವನ್ನು ಒಗ್ಗೂಡಿ ಸುವ ಕಾರ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಬಿ.ಎ. ಜೀವಿಜಯ ಕರೆ ನೀಡಿದ್ದಾರೆ.
ನಗರದ ಕೂರ್ಗ್ ಕಮ್ಯೂನಿಟಿ ಹಾಲ್‌ನಲ್ಲಿ ನಡೆದ ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರ ಜನ ಸಾಮಾನ್ಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲೂ ತಾರತಮ್ಯ ನೀತಿ ಅನು ಸರಿಸಲಾಗುತ್ತಿದ್ದು, ಕಾಂಗ್ರೆಸಿಗರನ್ನು ಗುರಿ ಮಾಡಿ ಕಾನೂನು ಬಳಸ ಲಾಗುತ್ತಿದೆ ಎಂದು ಆರೋಪಿಸಿದರು. ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಪಿ. ರಮೇಶ್ ಮಾತನಾಡಿ, ಕೋಮು ದ್ವೇಷ ಬಿತ್ತುತ್ತಿರುವ ಪಕ್ಷ ರಾಜ್ಯ ಮತ್ತು ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿದೆ ಎಂದು ಆರೋಪಿಸಿದರು. ಭಾರತೀಯ ಜನತಾ ಪಾರ್ಟಿ ಶ್ರೀಮಂತರ ಪರವಾಗಿದೆ ಹೊರತು ಬಡವರ ಪರವಾಗಿಲ್ಲ. ಮುಂದಿನ ಬಡವರ ಧ್ವನಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಮುಂದಾಗಬೇಕು ಎಂದು ಕರೆ ನೀಡಿದರು. ಕನ್ಯಾಕುಮಾರಿ ಯಿಂದ ಕಾಶ್ಮೀರ ದವರೆಗೆ ಕಾಂಗ್ರೆಸ್ ಪಕ್ಷ ಹಮ್ಮಿ ಕೊಂಡಿರುವ ‘ಭಾರತ್ ಜೋಡೋ' ಯಾತ್ರೆಯು ಅ. ೧ ರಂದು ನಂಜನಗೂಡು ವ್ಯಾಪ್ತಿಯ ಕಳಲೆ ಗೇಟ್ ಬಳಿ ಆಗಮಿಸಲಿದ್ದು, ಕೊಡಗಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳುವಂತೆ ತಿಳಿಸಿದರು. ಕಾಂಗ್ರೆಸ್ ಯುವ ಮುಖಂಡ ಡಾ. ಮಂಥರ್ ಗೌಡ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಮಾತ್ರ ಸಂಘಟನೆ ಮಾಡದೆ, ನಿರಂತರವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಬೇಕು ಎಂದು ಕಿವಿಮಾತು ಹೇಳಿದರು. ಅಲ್ಪಸಂಖ್ಯಾ ತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್ ಮಾತನಾಡಿ, ಬಿಜೆಪಿ ಅಲ್ಪಸಂಖ್ಯಾತರನ್ನು ಶೋಷಣೆ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಎತ್ತಿಕಟ್ಟಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ. ಪೀಟರ್, ನಿರಂತರ ಬೆಲೆ ಏರಿಕೆ, ಜಿಎಸ್‌ಟಿಯಿಂದಾಗಿ ಜನರು ಅತಂತ್ರ ಸ್ಥಿತಿಗೆ ತಲುಪಿದ್ದಾರೆ. ಅಲ್ಲದೆ ಕಳಪೆ ಕಾಮಗಾರಿಗಳ ಮೂಲಕ ಜನರ ಹಣ ಪೋಲಾಗುತ್ತಿದೆ ಎಂದು ಟೀಕಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಪಾಷ, ಅಲ್ಪಸಂಖ್ಯಾತರ ಮಹಿಳಾ ಘಟಕದ ಉಪಾಧ್ಯಕ್ಷೆ ಎಂ.ಎA. ಅಮೀನ, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ. ರಾಜೇಶ್, ಮಾಜಿ ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ನಗರಸಭೆ ಮಾಜಿ ಅಧ್ಯಕ್ಷೆ ಜುಲೇಕಾಬಿ ಮತ್ತಿತರರು ಉಪಸ್ಥಿತ ರಿದ್ದರು. ಮಡಿಕೇರಿ ಬ್ಲಾಕ್‌ನ ಹಂಗಾಮಿ ಅಧ್ಯಕ್ಷ ಎಂ.ಎA. ಮೊಹಮ್ಮದ್ ಯಾಕುಬ್ ಸ್ವಾಗತಿಸಿ, ನಿರೂಪಿಸಿದರು.
ಸನ್ಮಾನ
ಉಗಾಂಡದಲ್ಲಿ ಪ್ಯಾರಾ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾಗವಹಿಸಿ ಕಂಚಿನ ಪದಕಗಳಿಸಿ ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟು ಜಂಶದ್ ಇಸ್ಮಾಯಿಲ್ ಹಾಗೂ ಕೆಪಿಸಿಸಿ ಮಾಧ್ಯಮ ಘಟಕದ ವಕ್ತಾರರಾಗಿ ಆಯ್ಕೆಯಾದ ಟಿ.ಪಿ. ರಮೇಶ್ ಅವರನ್ನು ಸನ್ಮಾನಿಸಿ ಗೌರವಿ ಸಲಾಯಿತು. ಇದೇ ಸಂದರ್ಭ ಅಲ್ಪಸಂಖ್ಯಾತ ಮಹಿಳಾ ಘಟಕಕ್ಕೆ ಆಯ್ಕೆಯಾದ ನೂತನ ಪದಾಧಿಕಾರಿ ಗಳಿಗೆ ಆದೇಶ ಪತ್ರ ಹಸ್ತಾಂತರಿಸಲಾಯಿತು.