ಕೂಡಿಗೆ, ಅ. ೨: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ತಾ. ೨೬ ರಿಂದ ನವರಾತ್ರಿ ಪೂಜಾ ಕಾರ್ಯಕ್ರಮಗಳು ಆರಂಭಗೊAಡಿವೆ.
ನವರಾತ್ರಿಯ ಅಂಗವಾಗಿ ಪ್ರತಿ ದಿನ ಸಂಜೆ ೭ ಗಂಟೆಗೆ ಮಹಾದೇವಿಯ ಸನ್ನಿಧಿಯಲ್ಲಿ ಭಕ್ತ ವೃಂದದ ಮೂಲಕ ಶ್ರೀ ಲಲಿತ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ ನಡೆಯುತ್ತಿದೆ. ಶ್ರೀ ಲಲಿತ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆಯ ಕಾರ್ಯಕ್ರಮದಲ್ಲಿ ಹುದುಗೂರು ಮದಲಾಪುರ ಸೀಗೆಹೊಸೂರು ಹಾರಂಗಿ ಕುಶಾಲನಗರ ಕೂಡಿಗೆ ಸೇರಿದಂತೆ ನೂರಾರು ಮಹಿಳೆಯರು ಭಾಗವಹಿಸಿದ್ದರು. ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಚಾಮಿ ತಿಳಿಸಿದ್ದಾರೆ.