ಮಡಿಕೇರಿ, ಅ. ೨: ಮೂರ್ನಾಡು ಜೂನಿಯರ್ ಕಾಲೇಜು ರಾಷ್ಟಿçÃಯ ಸೇವಾ ಯೋಜನಾ ಘಟಕದ ೨೦೨೧-೨೨ನೇ ಸಾಲಿನ ವಾರ್ಷಿಕ ಶಿಬಿರದ ಉದ್ಘಾಟನೆ ಹೊದ್ದೂರು ವಾಟೆಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಕುಸುಮಾವತಿ ಅವರು ಶಿಬಿರ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಜಿ. ಮಾದಪ್ಪ ವಹಿಸಿದ್ದರು. ವಿದ್ಯಾಸಂಸ್ಥೆ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಮಂದಣ್ಣ, ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ಇನ್ನಿತರರು ಉಪಸ್ಥಿತರಿದ್ದರು. ಶಿಬಿರವು ವಾರದ ತನಕ ನಡೆದು ತಾ. ೪ ರಂದು ಮುಕ್ತಾಯಗೊಳ್ಳಲಿದೆ.