ಕುಶಾಲನಗರ, ಅ. ೪: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ತಾಲೂಕಿನÀ ಮುಳ್ಳುಸೋಗೆ ಪಂಚಾಯಿತಿ ಗುಮ್ಮನಕೊಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಯಾದ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಉಚಿತ ಆಯುಷ್‌ಮಾನ್ ಭಾರತ್ ಕಾರ್ಡ್ ನೋಂದಣಿ ಶಿಬಿರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಉದ್ಘಾಟಿಸಿದರು. ಮುಳ್ಳುಸೋಗೆ ಪಂಚಾಯಿತಿ ಅಧ್ಯಕ್ಷ ಚೆಲುವರಾಜು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ರಾಮನಾಥನ್, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ನವನೀತ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಎಂ.ಡಿ ಕೃಷ್ಣಪ್ಪ, ಮಣಿ, ವೇದಾವತಿ, ಮುರುಳಿ, ಜಿ.ಬಿ. ಜಗದೀಶ್, ಸಂತೋಷ್, ಆಸಿಫ್, ಕುಮಾರ್, ಸಂಗೀತ, ಹರಿಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.