ಮಡಿಕೇರಿ, ಅ. ೪ : ಕಾವೇರಿ ನದಿ ಉತ್ಸವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಮುಖರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಕಾವೇರಿ ನದಿ ಸ್ವಚ್ಛತಾ ಆಂದೋಲನ ಆಶ್ರಯದಲ್ಲಿ ಕಾವೇರಿ ನೀರಾವರಿ ನಿಗಮ ಸಹಯೋಗದೊಂದಿಗೆ ತಾ. ೨೧ ರಂದು ತಲಕಾವೇರಿ ಕ್ಷೇತ್ರದಿಂದ ಚಾಲನೆಗೊಳ್ಳಲಿರುವ ಕಾವೇರಿ ನದಿ ಉತ್ಸವ ಕಾರ್ಯಕ್ರಮದ ಯಶಸ್ವಿಗೆ ಜಿಲ್ಲಾಡಳಿತದ ಸಹಕಾರ ಕೋರಲಾಯಿತು.

ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಅವರೊಂದಿಗೆ ಕಾರ್ಯಕ್ರಮದ ಬಗ್ಗೆ ಸಮಗ್ರ ಮಾಹಿತಿ ನೀಡಿ ಚರ್ಚಿಸಲಾಯಿತು. ಕಾವೇರಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕ ಎಂ.ಎನ್. ಚಂದ್ರಮೋಹನ್, ಜಿಲ್ಲಾ ಸಂಚಾಲಕಿ ರೀನಾ ಪ್ರಕಾಶ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಡೆಪAಡ ಬೋಸ್ ಮೊಣ್ಣಪ್ಪ, ಟ್ರಸ್ಟಿಗಳಾದ ಡಿ.ಆರ್.ಸೋಮಶೇಖರ್, ಕೆ.ಜಿ ಮನು ಇದ್ದರು.