ಕೂಡಿಗೆ, ಅ. ೪: ಹೆಬ್ಬಾಲೆ ಗ್ರಾಮ ಪಂಚಾಯಿತಿ, ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ವತಿಯಿಂದ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ರಕ್ತದಾನ ಅಮೃತ ಮಹೋತ್ಸವ ಶಿಬಿರವು ಹೆಬ್ಬಾಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ ನೆರವೇರಿಸಿ ರಕ್ತದಾನದ ಬಗ್ಗೆ ಸವಿಸ್ತಾರವಾಗಿ ಮಾತಾನಾಡಿದರು. ರಕ್ತದಾನ ಅಮೃತ ಮಹೋತ್ಸವ ಶಿಬಿರ ಯೋಜನೆಗಳ ಬಗ್ಗೆ ಡಾ. ಭರತ್‌ಕುಮಾರ್ ಮಾಹಿತಿ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ್, ಚಂದ್ರಶೇಖರ ಜೋಗಿ, ಪುಟ್ಟ ಲಕ್ಷö್ಮಮ್ಮ, ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕರುಂಬಯ್ಯ, ಹೆಬ್ಬಾಲೆ ವೈದ್ಯಾಧಿಕಾರಿ ಡಾ. ಭರತ್ ಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹಾಜರಿದ್ದರು.