ಸೋಮವಾರಪೇಟೆ, ಅ. ೭: ಕಾಂಗ್ರೆಸ್ ಪಕ್ಷದ ಮುಖಂಡ, ಕೇರಳ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಒಕ್ಕಲಿಗ ಗೌಡ ಸಮುದಾಯದ ಸುಗ್ಗಿ ಕುಣಿತ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು.

ಭಾರತ್ ಜೋಡೋ ಯಾತ್ರೆಯು ಇಂದು ಮೈಸೂರಿನ ನಂಜನಗೂಡಿನಲ್ಲಿ ನಡೆದ ಸಂದರ್ಭ ಸೋಮವಾರಪೇಟೆ ಭಾಗದ ಒಕ್ಕಲಿಗ ಸಮುದಾಯದ ಪ್ರಮುಖ ಆಚರಣೆಗಳಲ್ಲಿ ಒಂದಾದ ಸುಗ್ಗಿ ಕುಣಿತ ತಂಡ ಭಾಗವಹಿಸಿ ಸುಗ್ಗಿ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ. ಲೋಕೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್ಲು, ಎಸ್.ಸಿ. ಘಟಕದ ರಾಜ್ಯ ಸಂಯೋಜಕ ಜಯೇಂದ್ರ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ನಂದಕುಮಾರ್, ಯು.ಕೆ. ಶಿವರಾಜ್, ಜಗದೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.