ಕೂಡಿಗೆ, ಅ. ೭: ಕೂಡುಮಂಗಳೂರು ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರ ತಾ.೮ರಂದು (ಇಂದು) ಲೋಕಾರ್ಪಣೆ ಗೊಳ್ಳಲಿದೆ.

ದುಬಾರೆ ಮತ್ತು ಮತ್ತಿಗೋಡು ಸಾಕಾನೆಗಳ ಶಿಬಿರಗಳ ಸಾಲಿನಲ್ಲಿ ಮೂರನೆ ಶಿಬಿರವನ್ನು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಲೋಕಾರ್ಪಣೆ ಗೊಳಿಸಲಿದ್ದಾರೆ.

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲಭಾಗದಲ್ಲಿರುವ ಅರಣ್ಯ ಇಲಾಖೆಗೆ ಸೇರಿದ ಟ್ರೀಪಾರ್ಕ್ಗೆ ಹೊಂದಿ ಕೊಂಡAತೆ ಇರುವ ೧೦ ಎಕರೆ ಪ್ರದೇಶದಲ್ಲಿ ನೂತನ ಸಾಕಾನೆ ಶಿಬಿರ ನಿರ್ಮಿಸಲು ಸರಕಾರ ರೂ. ೫೦ ಲಕ್ಷ ಅನುದಾನ ಒದಗಿಸಿತ್ತು. ಅದರಂತೆಯೇ ಸಾಕಾನೆ ಶಿಬಿರದ ಜೊತೆಗೆ ಟ್ರೀಪಾರ್ಕ್ ಕೂಡ ಲೋಕಾರ್ಪಣೆಗೊಳ್ಳಲಿದೆ.

ದುಬಾರೆಯಲ್ಲಿ ಒಟ್ಟು ೩೨ ಸಾಕಾನೆಗಳಿವೆ. ಇಲ್ಲಿಂದ ೧೫ ಸಾಕಾನೆಗಳನ್ನು ಹಾರಂಗಿಗೆ ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ.

(ಮೊದಲ ಪುಟದಿಂದ) ಪ್ರಾರಂಭಿಕ ಹಂತವಾಗಿ ಈಗಾಗಲೇ ಏಕದಂತ, ರಾಮ, ಮಾರುತಿ, ಸುಬ್ರಮಣ್ಯ, ವಿಕ್ರಮ ಹೆಸರಿನ ೫ ಸಾಕಾನೆಗಳನ್ನು ಸ್ಥಳಾಂತರಿಸಲಾಗಿದೆ.

ದಸರಾದಲ್ಲಿ ಪಾಲ್ಗೊಂಡಿರುವ ವಿಜಯ ಆನೆ ಮೈಸೂರಿನಿಂದ ನೇರವಾಗಿ ಹೊಸ ಶಿಬಿರ ಸೇರಿಕೊಳ್ಳಲಿದೆ.

ಮಾವುತ ಕಾವಾಡಿಗರಿಗೆಂದು ಈಗಾಗಲೆ ೪ ವಸತಿಗೃಹ ನಿರ್ಮಿಸಲಾಗಿದ್ದು, ಇನ್ನೂ ಮತ್ತೆ ೪ ಮನೆಗಳು ನಿರ್ಮಾಣ ಹಂತದಲ್ಲಿವೆ.

ಮುಂಬರುವ ದಿನಗಳಲ್ಲಿ ಪ್ರವಾಸಿಗರಿಗೆ ಒಬ್ಬರಿಗೆ ೩೦ ರೂ ಪ್ರವೇಶ ಶುಲ್ಕ ನಿಗದಿಪಡಿಸಲಾಗುವುದು. ಹಾರಂಗಿ ಹಿನ್ನೀರಿನಲ್ಲಿ ಎರಡು ಪೆಡಲ್ ಬೋಟ್‌ಗಳಿದ್ದು, ಬೋಟಿಂಗ್ ಮಾಡಲು ಪ್ರತ್ಯೇಕವಾಗಿ ಒಬ್ಬರಿಗೆ ೫೦ ರೂ ನಿಗದಿಪಡಿಸುವ ಯೋಜನೆ ಸಿದ್ಧಗೊಂಡಿದೆ.

ಶಿಬಿರ ಪ್ರಾರಂಭವಾದ ಬಳಿಕ ಹಂತಹAತವಾಗಿ ಮತ್ತಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿ ಶಿಬಿರವನ್ನು ಅಭಿವೃದ್ಧಿಪಡಿಸಲಾಗುವುದು. ಎಂದು ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಮ ತಿಳಿಸಿದ್ದಾರೆ.