ಮಡಿಕೇರಿ, ಅ. ೬: ೨೦೨೨ ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇ.೯೦ ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-೧ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೩ಎ ಮತ್ತು ೩ಬಿ ರೂ.೧ ಲಕ್ಷ ಮಿತಿಯೊಳಗಿರಬೇಕು. ಅರ್ಜಿ ಸಲ್ಲಿಸಲು ತಾ. ೨೧ ರ ಸಂಜೆ ೫ ಗಂಟೆ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ ವಿಳಾಸ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ. gov.iಟಿ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.