ಮಡಿಕೇರಿ, ಅ.೭ : ಕೊಡಗು ಜಿಲ್ಲಾಡಳಿತ, ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ೬೮ ನೇ ವನ್ಯಜೀವಿ ಸಪ್ತಾಹ: ೨೦೨೨ರ ಅಂಗವಾಗಿ ಮಡಿಕೇರಿ ನಗರದಲ್ಲಿ ಬೈಸಿಕಲ್ ಜಾಥಾ ಹಾಗೂ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸಲಾಯಿತು.

ಅರಣ್ಯ ಇಲಾಖೆಯೊಂದಿಗೆ ಶಾಲಾ ಶಿಕ್ಷಣ ಇಲಾಖೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್, ಗ್ರೀನ್ ಸಿಟಿ ಫೋರಂ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆ, ಬೆಂಗಳೂರಿನ ಅಡವಿ ವೈಲ್ಡ್ ಅಲರ್ಟ್ ಸಂಸ್ಥೆ, ಕ್ಲೀನ್ ಕೂರ್ಗ್ ಇನಿಷಿಯೇಟಿವ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ಸೈಕಲ್ ಜಾಥಾದಲ್ಲಿ ಅಧಿಕಾರಿಗಳು, ನೌಕರರು, ಶಾಲಾ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು, ಸ್ವಯಂ ಸೇವಕರು ರಸ್ತೆಯಂಚಿನಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಬಾಟಲ್‌ಗಳು ಮತ್ತಿತರ ಘನತ್ಯಾಜ್ಯಗಳನ್ನು ಸಂಗ್ರಹಿಸುವ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡರು.

ಸೈಕಲ್ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ಕೆ ಹಸಿರು ನಿಶಾನೆ ಮೂಲಕ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್, ಪ್ರತಿಯೊಬ್ಬರೂ ಪ್ಲಾಸ್ಟಿಕ್ ತ್ಯಜಿಸುವ ಮೂಲಕ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಪಣ ತೊಡುವ ಮೂಲಕ ಸ್ವಚ್ಛ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು. ವನ್ಯಜೀವಿ ಸಪ್ತಾಹ ಅಂಗವಾಗಿ ಅರಣ್ಯ ಇಲಾಖೆಯ ವತಿಯಿಂದ ವಿವಿಧ ಕಾರ್ಯಕ್ರಮಗಳ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಕೊಡಗು ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ನಿರಂಜನ ಮೂರ್ತಿ ಮಾತನಾಡಿ, ವನ್ಯಜೀವಿ ಸಪ್ತಾಹ ಅಂಗವಾಗಿ ಅರಣ್ಯ ಇಲಾಖೆಯ ವತಿಯಿಂದ ವಿವಿಧ ಕಾರ್ಯಕ್ರಮಗಳ ಮೂಲಕ ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ , ಸ್ವಚ್ಛ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆ ಕುರಿತು ತಿಳಿಸಿದರು. ಮಡಿಕೇರಿ ನಗರದ ಅರಣ್ಯ ಭವನದಿಂದ ಪ್ರಾರಂಭವಾದ ೪.೫ ಕಿ.ಮೀ ಜಾಥಾವು ಮುಖ್ಯ ರಸ್ತೆ ಮೂಲಕ ಸಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತ, ಜನರಲ್ ತಿಮ್ಮಯ್ಯ ವೃತ್ತ ಹಾಗೂ ಮಹದೇವಪೇಟೆ ಮುಖಾಂತರ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಸಮಾಪನಗೊಂಡಿತು. ಬೆಂಗಳೂರಿನ ಅಡವಿ ವೈಲ್ಡ್ ಅಲರ್ಟ್ ಸಂಸ್ಥೆ ವತಿಯಿಂದ ವನ್ಯಜೀವಿ ಸಪ್ತಾಹ ಅಂಗವಾಗಿ ಹೊರತಂದಿರುವ ಬಟ್ಟೆ ಕೈಚೀಲವನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಾಥಾದಲ್ಲಿ ಸ್ವತಃ ಬೈಸಿಕಲ್ ತುಳಿಯುವ ಮೂಲಕ ಗಮನ ಸೆಳೆದರು. ಜಿಲ್ಲಾಧಿಕಾರಿ ಪುತ್ರಿ ಹರ್ಷಿತಾ ಹಾಗೂ ಪುತ್ರ ಅನಿಕೇತ್ ಚಂದ್ರ ಅವರುಗಳೂ ಜಾಥಾದಲ್ಲಿ ಪಾಲ್ಗೊಂಡರು.

ವನ್ಯಜೀವಿ ವಿಭಾಗದ ಡಿಸಿಎಫ್ ಶಿವರಾಂಬಾಬು, ಎಸಿಎಫ್ ಶ್ರೀನಿವಾಸಮೂರ್ತಿ, ಎ.ಎ.ಗೋಪಾಲ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಜಿ.ಅನಂತಶಯನ, ಗ್ರೀನ್ ಸಿಟಿ ಫೋರಂನ ಮುಖ್ಯಸ್ಥ ಚೇಯಂಡ ಸತ್ಯ, ಪ್ರಮುಖರಾದ ಕುಕ್ಕೇರ ಜಯ ಚಿಣ್ಣಪ್ಪ, ಅರುಣ್ ಅಪ್ಪಚ್ಚು, ಬೆಂಗಳೂರಿನ ಅಡವಿ ವೈಲ್ಡ್ ಅಲರ್ಟ್ ಸಂಸ್ಥೆಯ ಸಂಸ್ಥಾಪಕ ಪವನ್ ಜೋಷಿ, ತಾಲೂಕು ಕಸಾಪ ಅಧ್ಯಕ್ಷ ಅಂಬೇಕಲ್ ನವೀನ್, ಕೆ.ಎಸ್.ಮೂರ್ತಿ, ಪದಾಧಿಕಾರಿಗಳಾದ ಎಂ.ಎನ್.ವೆAಕಟನಾಯಕ್, ಕೆ.ಯು.ರಂಜಿತ್, ಕೆ.ವಿ.ಉಮೇಶ್, ಕ್ಲಬ್ ಮಹೀಂದ್ರದ ಪ್ರಮುಖರಾದ ನವೀನ್ ನರೋನ್ಹ, ಅರುಣ್ ಕುಮಾರ್, ಸ್ವಯಂ ಸೇವಕರಾದ ಎಂ.ಎಸ್.ಕೇಶವಮೂರ್ತಿ, , ಎಸ್.ಆರ್.ಶಿವಲಿಂಗ, ಸಾಗರ್ ತೊರೆನೂರು ಮೊದಲಾದವರು ಪಾಲ್ಗೊಂಡಿದ್ದರು.

ವನ್ಯಜೀವಿ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯದಲ್ಲಿ ಕೂಡಿಗೆ ಸೈನಿಕ ಶಾಲೆ ಕೊಡಗು, ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಇಕೋ ಕ್ಲಬ್ ಹಾಗೂ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು, ನಗರದ ಗ್ರೀನ್ ಸಿಟಿ ಫೋರಂ ಹಾಗೂ ಸ್ಕೌಟ್ಸ್ ಸಂಸ್ಥೆ ಹಾಗೂ ಕಸಾಪ ಪದಾಧಿಕಾರಿಗಳು, ನೆಹರು ಯುವ ಕೇಂದ್ರ, ಬೆಂಗಳೂರಿನ ಅಡವಿ ವೈಲ್ಡ್ ಅಲರ್ಟ್ ಸಂಸ್ಥೆ, ಕ್ಲಬ್ ಮಹೀಂದ್ರದ ಅರಣ್ಯ ಇಲಾಖೆಯ ಸಿಬ್ಬಂದಿ, ಕ್ಲಬ್ ಮಹೀಂದ್ರ ರೆಸಾರ್ಟ್ನ ಉದ್ಯೋಗಸ್ಥರ ಮನೋರಂಜನಾ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ನಾಗರಿಕರು ಭಾಗವಹಿಸಿದ್ದರು. ಬೆಂಗಳೂರಿನ ಅಡವಿ ವೈಲ್ಡ್ ಅಲರ್ಟ್ ಸಂಸ್ಥೆ ವತಿಯಿಂದ ವನ್ಯಜೀವಿ ಸಪ್ತಾಹ ಅಂಗವಾಗಿ ಹೊರತಂದಿರುವ ಬಟ್ಟೆ ಕೈಚೀಲವನ್ನು ಜಾಥಾದಲ್ಲಿ ಪಾಲ್ಗೊಂಡಿದ್ದವರಿಗೆ ವಿತರಿಸಲಾಯಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಪರಿಸರ ಸ್ವಚ್ಛತೆ, ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತಾದ ಘೋಷಣಾ ಫಲಕಗಳನ್ನು ಹಿಡಿದು ಪರಿಸರ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.