ಕೂಡಿಗೆ, ಅ. ೭: ಕಂದಾಯ ಇಲಾಖೆಯ ವತಿಯಿಂದ ನೀಡಲಾಗುವ ಹಕ್ಕುಪತ್ರಕ್ಕೆ ೯೪ ಸಿ ಅರ್ಜಿಗಳನ್ನು ಕಂದಾಯ ಇಲಾಖೆಗೆ ಸಲ್ಲಿಸಲಾಗಿದ್ದ ಜಾಗಗಳ ಸ್ಥಳ ಪರಿಶೀಲನೆಯನ್ನು ನಡೆಸಲಾಯಿತು. ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ನೇತೃತ್ವದಲ್ಲಿ ತಂಡ ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆನೂರು ಚಿಕ್ಕ ಅಳುವಾರ ಅರಸಿನಗುಪ್ಪೆ, ಅಳಲುಗುಪ್ಪೆ ಸೇರಿದಂತೆ ಉಪ ಗ್ರಾಮಗಳಿಗೆ ತೆರಳಿ ಅರ್ಜಿ ಸಲ್ಲಿಸಿದ ವ್ಯಕ್ತಿಗಳ ಮನೆಗಳ ಪರಿಶೀಲನೆಯನ್ನು ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್ ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾಮ ಲೆಕ್ಕಾಧಿಕಾರಿ ಪೀರ್ ಮಹಮ್ಮದ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.