ಸಿದ್ದಾಪುರ, ಅ. ೮: ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಗೆ ಒಳಪಡುವ ಅಭ್ಯತ್‌ಮಂಗಲ, ನೆಲ್ಯಹುದಿಕೇರಿ, ಬೆಟ್ಟದಕಾಡು, ಸಂಪಿಗೆಕೊಲ್ಲಿ, ಕಾಟಿಬಾಣೆ, ಅಭ್ಯತ್‌ಮಂಗಲ ಒಂಟಿಯAಗಡಿ, ವಾಲ್ನೂರು-ತ್ಯಾಗತ್ತೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಮರಳಿ ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ತಾ. ೧೦ ಹಾಗೂ ೧೧ ರಂದು ಬೆಳಗ್ಗೆ ೮ ಗಂಟೆಯಿAದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಎರಡು ದಿನದಂದು ಕಾಫಿ ತೋಟದ ಮಾಲಿಕರು, ಕಾರ್ಮಿಕರು, ಶಾಲಾ ಮಕ್ಕಳು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹಾಗೂ ಕಾಡಾನೆಗಳ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.