ಕೂಡಿಗೆ, ಅ. ೮: ನೂತನವಾಗಿ ಆರಂಭಗೊAಡ ಹಾರಂಗಿ ಸಾಕಾನೆ ಶಿಬಿರದ ಸಮೀಪದಲ್ಲಿ ಹಾರಂಗಿ ಅಣೆಕಟ್ಟೆಯ ಹಿನ್ನೀರಿನಲ್ಲಿ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ಸಂಸ್ಥೆಯ ವತಿಯಿಂದ ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೋಟಿಂಗ್ ವ್ಯವಸ್ಥೆಯನ್ನು ಕಲ್ಪಿಸುವ ಜಾಗವನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತ್ತು ಜಿಲ್ಲಾಧಿಕಾರಿ ಡಾ. ಸತೀಶ ಸೇರಿದಂತೆ ಅರಣ್ಯ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು.
ನಂತರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಜಿಲ್ಲಾಧಿಕಾರಿಯಿಂದ ಬೋಟಿಂಗ್ ವ್ಯವಸ್ಥೆ ಮತ್ತು ಜಲಕ್ರೀಡೆಯ ಬಗ್ಗೆ ಮಾಹಿತಿಯನ್ನು ಪಡೆದರು. ಈಗಾಗಲೇ ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ಸಂಸ್ಥೆಯ ಮೂಲಕ ಅರಂಭ ಮಾಡಲು ಸ್ಥಳ ಪರಿಶೀಲನೆ ನಡೆದಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಸಂಬAಧಿಸಿದ ಟೆಂಡರ್ ಪ್ರಕ್ರಿಯೆಗಳು ನಡೆಯಬೇಕಾಗಿದೆ ಇದರ ಜೊತೆಯಲ್ಲಿ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್. ನಿರಂಜನ ಮೂರ್ತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ, ಎಸಿಎಫ್ ಗೋಪಾಲ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ಶಿವರಾಮ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್ ಸೇರಿದಂತೆ ಇನ್ನಿತರರು ಹಾಜರಿದ್ದರು.