ಮಡಿಕೇರಿ, ಅ. ೭: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಬೆಸ್ತ, ಅಂಬಿಗ/ ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ನವೆಂಬರ್ ೯ ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ./ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ನಿಗಮದ ವೆಬ್ಸೈಟ್ hಣಣಠಿ://ಚಿmbigಚಿಡಿಚಿಜeveಟoಠಿmeಟಿಣ.ಞಚಿಡಿಟಿಚಿಣಚಿಞಚಿ.gov.iಟಿನ್ನು ಸಂಪರ್ಕಿಸಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ
ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ) ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ೨.೫೦ ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದ್ದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ಹಿಂದಿನ ವರ್ಷದ ಮಾರ್ಕ್ಸ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಪೈಡ್ ಪ್ರಮಾಣ ಪತ್ರ (ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ಶುಲ್ಕ ರಶೀದಿ (ಮೆಟ್ರಿಕ್ ನಂತರದ ಕೋರ್ಸ್ಗಳಿಗೆ), ತಂದೆ, ತಾಯಿ, ಪೋಷಕರ ಆಧಾರ್ ಪ್ರತಿ, ಆದಾಯ ಮಿತಿ ೨.೫೦ ಲಕ್ಷಕ್ಕಿಂತ ಒಳಗಿರುವ ಸಿಇಟಿ ಮೂಲಕ ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬಿ.ರ್ಕ್ ಕೋರ್ಸ್ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು/ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಶೇ.೧೦೦ ರಷ್ಟು ಆಯಾಯ ಸಂಸ್ಥೆಗಳಿಗೆ ನಿಗದಿಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ.
ಅರ್ಜಿಯನ್ನು ವೆಬ್ಸೈಟ್ ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೦೮೦-೪೪೫೫೪೪೫೫ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಇವರ ಕಚೇರಿ ದೂ.ಸಂ.೯೪೮೦೮೪೩೧೫೬/ ೦೮೨೭೬-೨೮೧೧೧೫ ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು
ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಹೊಸದಾಗಿ ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಈ ಸಂಸ್ಥೆಯಲ್ಲಿ ೦-೬ ವರ್ಷದ ಅನಾಥ, ಪರಿತ್ಯಜಿಸಲ್ಪಟ್ಟ ಹಾಗೂ ಒಪ್ಪಿಸಲ್ಪಟ್ಟ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳು ಈ ಸಂಸ್ಥೆಯಲ್ಲಿದ್ದು, ಈ ಮಕ್ಕಳನ್ನು ಪೋಷಿಸಲು ೪ ಆಯಾ ಹುದ್ದೆಗಳ ಅವಶ್ಯಕತೆ ಇರುತ್ತದೆ. ಅರ್ಹ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಕೆಲಸಕ್ಕೆ ಬರುವ ಸಿಬ್ಬಂದಿಗಳು ಹಗಲು ರಾತ್ರಿ ಪಾಳಿ ರೀತಿಯಲ್ಲಿ ಕೆಲಸ ನಿರ್ವಹಿಸಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸುವವರು ಮಡಿಲು ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಕಾವೇರಿ ಲೇಔಟ್, ಮಡಿಕೇರಿ, ಕೊಡಗು ಜಿಲ್ಲೆ ದೂ. ೦೮೨೭೨-೨೦೦೪೫೦ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿವೇತನ ಪಡೆಯಲು
ಪ್ರಸಕ್ತ ಸಾಲಿನಲ್ಲಿ ಮಡಿಕೇರಿ ತಾಲೂಕಿನ ವಿವಿಧ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ೨.೫೦ ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಯ ಆಧಾರ್ಕಾರ್ಡ್ (ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ (ಓPಅI) ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿಸಿರತಕ್ಕದು.), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ), ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ ಪ್ರತಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ. ಅಧ್ಯಯನ/ ಬೋನಾಪೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸಿನ ಶುಲ್ಕ ರಶೀಧಿ ಪ್ರತಿ, ತಂದೆ/ತಾಯಿ/ಪೋಷಕರ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಸಹಾಯಕ ನಿರ್ದೇಶಕರು, (ಗ್ರೇಡ್-೨) ಸಮಾಜ ಕಲ್ಯಾಣ ಇಲಾಖೆ, ವೀರಾಜಪೇಟೆ ಅವರ ಕಚೇರಿ ದೂ. ೯೪೮೦೮೪೩೧೫೭ ಅಥವಾ ನೇರ ಭೇಟಿ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕ್ರೀಡಾಪಟುಗಳಿಂದ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೧-೨೨ನೇ ಸಾಲಿನಲ್ಲಿ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟಿçÃಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟçಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂರ್ರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
೨೦೨೨-೨೩ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಆಸಕ್ತ ಕ್ರೀಡಾಪಟು ಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ತಾ. ೨೫ ರೊಳಗೆ ಪ್ರಸ್ತಾವನೆಯನ್ನು ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೮೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.