ಕೂಡಿಗೆ, ಅ. ೮: ಕುಶಾಲನಗರ-ಹಾರಂಗಿ ಮುಖ್ಯರಸ್ತೆಯು ತೀರ ಹಾಳಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಮೇರೆಗೆ ರೂ. ೧೦ ಕೋಟಿ ಹಣ ಬಿಡುಗಡೆಗೊಂಡಿದ್ದು, ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆದ ತಕ್ಷಣವೇ ಕಾಮಗಾರಿಯನ್ನು ಆರಂಭ ಮಾಡಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ತಿಳಿಸಿದರು.
ಈ ಸಂಬAಧ ಹಾರಂಗಿಯಲ್ಲಿ ಮಾಹಿತಿ ನೀಡಿದ ಅವರು, ಈಗಾಗಲೇ ನೀರಾವರಿ ಇಲಾಖೆಯ ವತಿಯಿಂದ ರಸ್ತೆಯ ಕಾಮಗಾರಿಯ ಕ್ರಿಯಾ ಯೋಜನೆ ಅನುಗುಣವಾಗಿ ಪ್ರಕ್ರಿಯೆ ನಡೆದಿದ್ದು ಸರಕಾರ ಮಟ್ಟದಲ್ಲಿ ಹಣ ಬಿಡುಗಡೆಗೆ ಅನುಮೋದನೆ ದೊರತಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ವ್ಯವಸ್ಥಿತವಾಗಿ ರಸ್ತೆಯ ಕಾಮಗಾರಿ ಯನ್ನು ಕೈಗೊಳ್ಳಲಾಗುವುದು. ಅಲ್ಲದೆ ನೀರಾವರಿ ಇಲಾಖೆ ಮೂಲಕ ಕೂಡಿಗೆ ಮತ್ತು ತೊರೆನೂರು ಗ್ರಾಮ ವ್ಯಾಪ್ತಿಯ ವಿವಿಧ ರಸ್ತೆಗಳ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಬಾಕಿ ಇರುವ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗು ವುದು ಎಂದರು.
ಈ ಸಂದರ್ಭದಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಾಸ್ಕರ್ ನಾಯಕ್, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಕುಶಾಲನಗರ ಕುಡ ಅಧ್ಯಕ್ಷ ಎಂ.ಎA. ಚರಣ್ ನಿರ್ದೇಶಕರಾದ ವೈಶಾಕ್, ಪುಂಡರಿಕಾಕ್ಷÀÀ, ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್ ಹಾಜರಿದ್ದರು.