ಮಡಿಕೇರಿ, ಅ. ೮: ಮನೆಯಲ್ಲಿ ಕಂಡುಬAದ ೫ ಅಡಿ ಉದ್ದದ ನಾಗರಹಾವನ್ನು ಉರಗ ರಕ್ಷಕ ಸುರೇಶ್ ಪೂಜಾರಿ ಸಂರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಸಿದ್ದಾಪುರ ಗ್ರಾಮದ ಇಂಜಿಲಗೆರೆ ಗ್ರಾಮದ ವಿನೋದ್ ಎಂಬವರ ಮನೆಯ ಅಡುಗೆ ಕೋಣೆಯಲ್ಲಿ ನಾಗರಹಾವು ಗೋಚರಿಸಿದೆ. ಈ ವಿಷಯವನ್ನು ವಿನೋದ್‌ಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಉರಗ ರಕ್ಷಕ ವಿನೋದ್ ೫ ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ಮಾಲ್ದಾರೆ ಅರಣ್ಯಕ್ಕೆ ಬಿಟ್ಟಿದ್ದಾರೆ.