ಕಣಿವೆ, ಅ. ೯: ಕುಶಾಲನಗರ ತಾಲೂಕು ಆಡಳಿತ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತ ಆಶ್ರಯದಲ್ಲಿ ಸುಂದರನಗರದ ವಾಲ್ಮೀಕಿ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಡೆಯಿತು.

ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ನರಗುಂದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜಕ್ಕೆ ಆದರ್ಶ ಪ್ರಾಯರಾಗಿ ಬದುಕು ನೀಡಿ ಮರೆಯಾದ ಮಹನೀಯರ ಸಾಲಿನಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿಯವರು ಸಮಾಜಕ್ಕೆ ಸಾರಿ ಹೋಗಿರುವ ಸಂದೇಶಗಳನ್ನು ನಾಡಿನ ಪ್ರತಿಯೊಬ್ಬರು ಪಾಲಿಸುವ ಮೂಲಕ ನಡೆ ಹಾಗೂ ನುಡಿಗಳಲ್ಲಿ ಶ್ರೇಷ್ಠತೆ ಸಾರಬೇಕೆಂದು ಕರೆಕೊಟ್ಟರು.

ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ ಮಾತನಾಡಿ ವಾಲ್ಮೀಕಿ ಮಹರ್ಷಿಗಳು ಬರೆದ ರಾಮಾಯಣ ಮಹಾಕಾವ್ಯ ವಿಶ್ವಕ್ಕೆ ನೀಡಿದ ಶ್ರೇಷ್ಠ ಸಾಹಿತ್ಯವಾಗಿದೆ ಎಂದರು.

ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್. ಅಶೋಕ್ ಮಾತನಾಡಿ, ವಾಲ್ಮೀಕಿ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಹಿಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಶ್ರಮದಿಂದ ರಾಜ್ಯದ ಪ್ರತೀ ಜಿಲ್ಲೆಯಲ್ಲೂ ವಾಲ್ಮೀಕಿ ಭವನ ನಿರ್ಮಿಸಿದ್ದನ್ನು ಸ್ಮರಿಸಿದರು.

ಇದೇ ಸಂದರ್ಭ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಸುಂಟಿಕೊಪ್ಪದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಎ.ಎಸ್. ಶ್ರೀಷಾ ಮಹರ್ಷಿ ವಾಲ್ಮೀಕಿ ಅವರ ಕುರಿತಾಗಿ ಪ್ರಧಾನ ಭಾಷಣ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಸುಂಟಿಕೊಪ್ಪದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಎ.ಎಸ್. ಶ್ರೀಷಾ ಮಹರ್ಷಿ ವಾಲ್ಮೀಕಿ ಅವರ ಕುರಿತಾಗಿ ಪ್ರಧಾನ ಭಾಷಣ ಮಾಡಿದರು.

ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಪ್ಪ, ಸುಂಟಿಕೊಪ್ಪ ನಾಡÀಕಚೇರಿ ಉಪ ತಹಶೀಲ್ದಾರ್ ಶಿವಪ್ಪ, ಕೃಷಿ ಇಲಾಖೆ ಅಧಿಕಾರಿ ಯಾದವ ಬಾಬು, ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಾಲಕೃಷ್ಣ ರೈ, ಕುಶಾಲನಗರ ತಾಲೂಕು ಅಧಿಕಾರಿ ಬಿ.ಸಿ. ಸ್ವಾಮಿ, ನಿವೃತ್ತ ಐಎಫ್‌ಎಸ್ ಅಧಿಕಾರಿ ಮರೂರು ಸಿದ್ದಪ್ಪ, ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ. ಚೆಲುವರಾಜು, ಸದಸ್ಯರಾದ ಮಣಿಕಂಠ, ಹರಿಣಿ, ಗಣೇಶ, ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕರಾದ ವೈ.ಟಿ. ಪರಮೇಶ್, ಚಂದನಕುಮಾರ್ ಮತ್ತಿತರರು ಇದ್ದರು.