ಮಡಿಕೇರಿ ಅ. ೯: ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆ ಹಾಗೂ ಅಲ್ಪಾವಧಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಸೇರಿದಂತೆ ಅನೇಕ ಬೆಳೆಗಳು ನಷ್ಟವಾಗಿದೆ. ಸರ್ಕಾರ ತಕ್ಷಣ ಕೊಡಗನ್ನು ಅತಿವೃಷ್ಟಿ ಪೀಡಿತ ಜಿಲ್ಲೆಯೆಂದು ಘೋಷಿಸಿ ಎಲ್ಲಾ ಬೆಳೆಗಾರರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಕಾಫಿ ಮಂಡಳಿ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಬೆಳೆ ನಷ್ಟ ಸಮೀಕ್ಷೆಯನ್ನು ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಆದರೆ ಬಹುತೇಕ ಗ್ರಾಮಗಳಿಗೆ ಇವರು ಭೇಟಿ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಜಿಲ್ಲೆಯ ಎಲ್ಲಾ ಗ್ರಾಮಗಳನ್ನು ಪರಿಹಾರಕ್ಕೆ ಪರಿಗಣಿಸ ಬೇಕು, ಇಲ್ಲದಿದ್ದರೆ ಕಾಫಿ ಮಂಡಳಿ, ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಕಚೇರಿಗಳು, ಜಿಲ್ಲಾಧಿಕಾರಿಗಳು ಹಾಗೂ ಶಾಸಕರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.

ಅತಿವೃಷ್ಟಿಯಿಂದ ಬೆಳೆಗಾರರಿಗೆ ನಿರಂತರವಾಗಿ ನಷ್ಟವಾಗಿದ್ದರೂ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಬೆಳೆಗಾರರ ಪರವಾಗಿ ಸರ್ಕಾರದ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಅತಿವೃಷ್ಟಿಗೆ ತುತ್ತಾದ ಜಿಲ್ಲೆಗೆ ಒಂದು ಬಾರಿಯೂ ಭೇಟಿ ನೀಡಿ ಪರಿಶೀಲಿಸಿಲ್ಲ ಎಂದು ಆರೋಪಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆ ಉಂಟಾಗಿದೆ, ಮಾಹಿತಿ ಇಲ್ಲ. ಜಿಲ್ಲೆಯ ಎಲ್ಲಾ ಗ್ರಾಮಗಳನ್ನು ಪರಿಹಾರಕ್ಕೆ ಪರಿಗಣಿಸ ಬೇಕು, ಇಲ್ಲದಿದ್ದರೆ ಕಾಫಿ ಮಂಡಳಿ, ತೋಟಗಾರಿಕೆ ಇಲಾಖೆ ಮತ್ತು ಕೃಷಿ ಇಲಾಖೆಯ ಕಚೇರಿಗಳು, ಜಿಲ್ಲಾಧಿಕಾರಿಗಳು ಹಾಗೂ ಶಾಸಕರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.

ಅತಿವೃಷ್ಟಿಯಿಂದ ಬೆಳೆಗಾರರಿಗೆ ನಿರಂತರವಾಗಿ ನಷ್ಟವಾಗಿದ್ದರೂ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಬೆಳೆಗಾರರ ಪರವಾಗಿ ಸರ್ಕಾರದ ಗಮನ ಸೆಳೆಯುವಲ್ಲಿ ವಿಫಲರಾಗಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಅತಿವೃಷ್ಟಿಗೆ ತುತ್ತಾದ ಜಿಲ್ಲೆಗೆ ಒಂದು ಬಾರಿಯೂ ಭೇಟಿ ನೀಡಿ ಪರಿಶೀಲಿಸಿಲ್ಲ ಎಂದು ಆರೋಪಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ರಸಗೊಬ್ಬರಗಳ ಕೊರತೆ ಉಂಟಾಗಿದೆ, ರಸ್ತೆ ಅವ್ಯವಸ್ಥೆ: ಜಿಲ್ಲೆಯ ಪ್ರಮುಖ ರಸ್ತೆಗಳು ಮತ್ತು ಗ್ರಾಮೀಣ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಹೊಂಡ, ಗುಂಡಿಗಳಲ್ಲಿ ರಸ್ತೆಯನ್ನು ಹುಡುಕುವಂತ್ತಾಗಿದೆ. ರಸ್ತೆ ಅಭಿವೃದ್ಧಿಯ ನೆಪದಲ್ಲಿ ಅನುದಾನ ದುರುಪಯೋಗ ವಾಗುತ್ತಿದ್ದು, ಕಳಪೆ ಕಾಮಗಾರಿ ಯಿಂದಾಗಿ ೬-೭ ತಿಂಗಳುಗಳಲ್ಲೇ ರಸ್ತೆಗಳಲ್ಲಿ ಗುಂಡಿಗಳು ಗೋಚರಿಸುತ್ತಿವೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದ್ದರೂ ಆಡಳಿತ ಪಕ್ಷದ ಶಾಸಕರು ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಟಾಟು ಮೊಣ್ಣಪ್ಪ ಆರೋಪಿಸಿದ್ದಾರೆ.