ಮಡಿಕೇರಿ, ಅ. ೮: ತಾ.೧೭ರಂದು ರಾತ್ರಿ ೭.೨೧ಕ್ಕೆ ಜರುಗಲಿರುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ-೨೦೨೨ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ತಾ. ೧೧ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅಧ್ಯಕ್ಷತೆಯಲ್ಲಿ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದ ಆವರಣದಲ್ಲಿ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಗೆ ಸಂಘ - ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಆಸಕ್ತ ಸಾರ್ವಜನಿಕರು ಭಾಗವಹಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.