ಮಡಿಕೇರಿ, ಅ. ೮: ತಾ. ೧೭ ರಂದು ಜರುಗಲಿರುವ ಶ್ರೀ ಕಾವೇರಿ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಯಲ್ಲಿ ಊಧ್ವಾರ್ಚನೆ ಹಾಗೂ ಶುಚಿತ್ವ ಕಾರ್ಯ ತಾ. ೧೦ ರಂದು ಬೆಳಿಗ್ಗೆ ೬ ರಿಂದ ಮಧ್ಯಾಹ್ನ ೩ ಗಂಟೆವರೆಗೆ ನಡೆಯಲಿದೆ. ಸಾರ್ವಜನಿಕ ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ಯಾವುದೇ ಸೇವೆಗಳು ಇರುವುದಿಲ್ಲ. ಆದುದ್ದರಿಂದ ಎಂದಿನAತೆ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕಾಗಿ ದೇವಾಲಯದ ಪ್ರಕಟಣೆ ತಿಳಿಸಿದೆ.