ಮಡಿಕೇರಿ, ಅ. ೮: ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರ ವ್ಯವಸ್ಥೆಯನ್ನು ಕಾಪಾಡಬೇಕಿದೆ ಎಂದು ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು.
ಕೊಡಗು ಅರಣ್ಯ ವೃತ್ತ, ಮಡಿಕೇರಿ ವನ್ಯ ಜೀವಿ ವಿಭಾಗದ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ವತಿಯಿಂದ "ಸುಸ್ಥಿರ ಪರಿಸರಕ್ಕಾಗಿ ಪ್ರಮುಖ ಜೀವಿಗಳ ಪುನರುತ್ಥಾನ" ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿದ್ದ ೬೮ನೇ ವನ್ಯ ಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೀವನದಿ ಕಾವೇರಿಯ ಉಗಮ ಸ್ಥಳವಾದ ತಲಕಾವೇರಿಯಲ್ಲಿ ಅರಣ್ಯ ಇಲಾಖೆಯು ರಾಜ್ಯ ವಿಜ್ಞಾನ ಪರಿಷತ್ತು ಮತ್ತಿತರ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ರೂಪಿಸಿ ರುವುದು ವಿಶೇಷವಾಗಿದೆ. ಶ್ರಮದಾನದ ಮೂಲಕ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯವನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ಹಮ್ಮಿಕೊಂಡು ತಲಕಾವೇರಿಗೆ ಆಗಮಿಸುವ ಯಾತ್ರಾರ್ಥಿಗಳಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುತ್ತಿರುವುದು ಪರಿಸರ ಪೂರಕ ಚಟುವಟಿಕೆಯಾಗಿದೆ ಎಂದು ರವಿ ಕಾಳಪ್ಪ ಹೇಳಿದರು.
‘ಸ್ವಚ್ಛತೆ ಮತ್ತು ವನ್ಯಜೀವಿ ಸಪ್ತಾಹದ ಮಹತ್ವ' ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್, ವನ್ಯಜೀವಿಗಳು ನಮ್ಮ ಭೂ ಜಗತ್ತಿನ ಪ್ರಮುಖ ಸಂಗತಿಗಳಾಗಿವೆ. ಅರಣ್ಯಕ್ಕೆ ನಾವು ಮಾಡುವ ಯಾವುದೇ ಹಾನಿಯು ಇಡೀ ಪರಿಸರ ವ್ಯವಸ್ಥೆಗೆ ಅಪಾಯವನ್ನು ತಂದೊಡ್ಡಬಹುದು. ಆದ್ದರಿಂದ, ಸಸ್ಯ ಮತ್ತು ಪ್ರಾಣಿಗಳನ್ನು ಸಂರಕ್ಷಿಸುವುದು ಬಹಳ ಮುಖ್ಯವಾದ ಸಂಗತಿ ಆಗಿದೆ ಎಂದರು.ವನ್ಯಜೀವಿ ವಿಭಾಗದ ಎಸಿಎಫ್ ಶ್ರೀನಿವಾಸ ನಾಯಕ್ ಮಾತನಾಡಿ, ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ ವನ್ಯಜೀವಿ ಸಪ್ತಾಹ ಆಚರಿಸಲಾಗುತ್ತಿದೆ ಎಂದರು. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಪದಾಧಿಕಾರಿ ಎಂ.ಎನ್. ವೆಂಕಟನಾಯಕ್, ಯಾತ್ರಾರ್ಥಿಗಳಿಗೆ ಪರಿಸರ ಸ್ವಚ್ಛತೆ ಬಗ್ಗೆ ತಿಳಿಸಿದರು.
ತಲಕಾವೇರಿ ವನ್ಯಜೀವಿ ವಿಭಾಗದ ಆರ್.ಎಫ್.ಓ. ಕೆ.ಕೊಟ್ರೇಶ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ಮೂರ್ತಿ, ಡಿ.ಆರ್. ಎಫ್. ಓ.ಗಳಾದ ಜೆ.ಕೆ. ಶ್ರೀಧರ್ ಆನಂದ್, ಅರಣ್ಯ ರಕ್ಷಕರಾದ ಸತೀಶ್, ಸಂತೋಷ್, ಯಮನೂರಿ, ಶ್ರೀಕಾಂತ್, ಅರಣ್ಯ ವೀಕ್ಷಕರು, ಯಾತ್ರಾರ್ಥಿಗಳು ಇತರರು ಇದ್ದರು. ತಲಕಾವೇರಿಗೆ ಆಗಮಿಸಿದ್ದ ಯಾತ್ರಾರ್ಥಿಗಳು ಕೂಡ ಸ್ವಚ್ಛತಾ ಕಾರ್ಯಕ್ಕೆ ಸಹಕರಿಸಿದ್ದು ವಿಶೇಷವಾಗಿತ್ತು.
ಶ್ರಮದಾನದ ಮೂಲಕ ಸ್ವಚ್ಛತೆ: ಅರಣ್ಯ ಇಲಾಖೆಯ ಅಧಿಕಾರಿಗಳು, ಅರಣ್ಯ ರಕ್ಷಕರು, ಸ್ವಯಂ ಸೇವಕರು ಜತೆಗೂಡಿ ತಲಕಾವೇರಿ ದೇವಸ್ಥಾನಕ್ಕೆ ತೆರಳುವ ಪ್ರವೇಶ ದ್ವಾರದ ಕೆಳಗಿನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಮತ್ತಿತರ ಕಸ ಕಡ್ಡಿಗಳನ್ನು ತೆರವುಗೊಳಿಸುವ ಮೂಲಕ ಪವಿತ್ರ ಸ್ಥಳವಾದ ತಲ ಕಾವೇರಿ ಕ್ಷೇತ್ರವನ್ನು ಸ್ವಚ್ಛಗೊಳಿಸಿದರು. ಇದಕ್ಕೂ ಮುನ್ನ ತಲಕಾವೇರಿ ಕ್ಷೇತ್ರಕ್ಕೆ ಆಗಮಿಸಿದ ಯಾತ್ರಾರ್ಥಿಗಳು ಪ್ಲಾಸ್ಟಿಕ್ ತ್ಯಜಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಮನವಿ ಮಾಡಲಾಯಿತು. ಇದೇ ವೇಳೆ ಸ್ವಚ್ಛ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆ ಕುರಿತು ಘೋಷಣೆಗಳನ್ನು ಕೂಗಿ ಜಾಗೃತಿ ಮಂಡಿಸಲಾಯಿತು.
ಸ್ವಚ್ಛತೆಯೇ ಸೇವೆ, ಸ್ವಚ್ಛತೆ ಇದ್ದಲ್ಲಿ ಆರೋಗ್ಯ, ಹಸಿರೇ ಉಸಿರು, ಕಾಡಿನ ರಕ್ಷಣೆ ಮತ್ತು ವನ್ಯಜೀವಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಕಾಡೇ ರಾಷ್ಟçದ ಸಂಪತ್ತು, ಪಶ್ಚಿಮ ಘಟ್ಟ ಸಂರಕ್ಷಣೆ ಎಲ್ಲರ ಹೊಣೆ ಎಂಬಿತ್ಯಾದಿ ಘೋಷಣೆಗಳ ಮೂಲಕ ಜಾಗೃತಿ ಮೂಡಿಸಲಾಯಿತು.