ಕುಶಾಲನಗರ, ಅ. ೯: ತಾ. ೨೧ ರಂದು ಹಮ್ಮಿಕೊಳ್ಳಲಾದ ಕಾವೇರಿ ನದಿ ಉತ್ಸವ ಕಾರ್ಯಕ್ರಮವನ್ನು ಕಾವೇರಿ ನೀರಾವರಿ ನಿಗಮ ಮೂಲಕ ನಡೆಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಮುಖ್ಯಮಂತ್ರಿಗಳು ಮತ್ತು ಜಲಸಂಪನ್ಮೂಲ ಸಚಿವರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಲ್ಲಿಸಿದ ಪತ್ರವನ್ನು ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಶನಿವಾರ ಸೂಚನೆಯನ್ನು ನೀಡಿದ್ದು, ತಲಕಾವೇರಿಯಲ್ಲಿ ತಾ. ೨೧ರಂದು ಕಾವೇರಿ ನದಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಸಂಬAಧ ನಿಗಮದಿಂದ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಆರಂಭಿಸುವAತೆ ನಿರ್ದೇಶಿಸಿದ್ದಾರೆ.
‘ಆಜಾದಿ ಕ ಅಮೃತ ಮಹೋತ್ಸವ’ ಹಿನ್ನೆಲೆಯಲ್ಲಿ ೨೦೨೧ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಾಗಿದ್ದ ಕಾವೇರಿ ನದಿ ಉತ್ಸವ ಕಾರಣಾಂತರಗಳಿAದ ಮುಂದೂಡಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿಗಳು
(ಮೊದಲ ಪುಟದಿಂದ) ಮತ್ತು ಸಚಿವರ ಗಮನಕ್ಕೆ ಜಿಲ್ಲೆಯ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮತ್ತು ಕೆ.ಜಿ. ಬೋಪಯ್ಯ ಅವರ ನೇತೃತ್ವದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನದ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ರೀನಾ ಪ್ರಕಾಶ್ ಮತ್ತಿತರರು ಇತ್ತೀಚೆಗೆ ನಿಯೋಗ ತೆರಳಿ ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರು ಮತ್ತು ಜಲ ಸಂಪನ್ಮೂಲ ಸಚಿವರುಗಳನ್ನು ಭೇಟಿ ಮಾಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗಿತ್ತು.
ಇದೀಗ ಮುಖ್ಯಮಂತ್ರಿಗಳು ಮತ್ತು ಜಲ ಸಂಪನ್ಮೂಲ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಒಪ್ಪಿಗೆ ನೀಡಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುವಂತೆ ನಿಗಮದ ಹಿರಿಯ ಅಧಿಕಾರಿಗಳಿಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಂಕರೇಗೌಡ ನಿರ್ದೇಶನ ನೀಡಿದ್ದಾರೆ.