ಮಡಿಕೇರಿ, ಅ. ೯: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು ಜಿಲ್ಲಾ ಘಟಕ, ಮಡಿಕೇರಿ ಹಾಗೂ ವೀರಾಜಪೇಟೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧೫೩ನೇ ಗಾಂಧೀ ಜಯಂತಿ ಪ್ರಯುಕ್ತ ‘ಗಾಂಧಿ ಸ್ಮೃತಿಯ ಕುರಿತು ಮತ್ತು ದುಶ್ಚಟಗಳ ವಿರುದ್ಧ ಜಾಗೃತಿ ಸಮಾವೇಶ ತಾ. ೧೦ ರಂದು (ಇಂದು) ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದಲ್ಲಿ ನಡೆಯಲಿದೆ.
ಜನಜಾಗೃತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಬಾನಂಗಡ ಅರುಣ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ರಾಮಕೃಷ್ಣ ಆಶ್ರಮದ ಶ್ರೀ ತತ್ವರೂಪಾನಂದಾ ಜೀ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ಪೊನ್ನಂಪೇಟೆ ಪೊಲೀಸ್ ಉಪನಿರೀಕ್ಷಕ ಸುಬ್ರಮಣಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್. ರಾಜೇಶ್, ಜನಜಾಗೃತಿ ವೇದಿಕೆಯ ಪ್ರಮುಖರುಗಳಾದ ಕೋಳೇರ ದಯಾ ಚಂಗಪ್ಪ, ಧನಂಜಯ, ಶಶಿ ಸುಬ್ರಮಣಿ, ಜುಲೇಖಾಬಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.